ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿಗೆ ಆಯ್ಕೆ

2 years ago

ಚಾಮರಾಜನಗರ: ನಗರದ ಪ್ರತಿಷ್ಠಿತ ರಂಗವಾಹಿನಿ ಸಂಸ್ಥೆ ನೀಡುವ 12ನೇ ವರ್ಷದ ಮುಳ್ಳೂರು ನಾಗರಾಜ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿಗೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲೂಕಿನ ಕವಿ ಎಂ ಜವರಾಜ್ ಅವರ  ಮೆಟ್ಟು ಹೇಳಿದ ಕಥಾ ಪ್ರಸಂಗ ಕವನ ಸಂಕಲನ ಆಯ್ಕೆಯಾಗಿದೆ. ಪ್ರಶಸ್ತಿ 10 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.

ಮೈಸೂರಿನಲ್ಲಿ ಸದ್ಯದಲ್ಲಿಯೇ ಏರ್ಪಡಿಸುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗವಾಹಿನಿ ಸಂಸ್ಥೆಯ ಅಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply