ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಬಿಜೆಪಿಯಲ್ಲೂ ಕೂಡ ರಣೋತ್ಸಾಹ ಮೂಡಿಸಿದೆ. ಆದರೆ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಅಪಸ್ವರ ಕೇಳಿ ಬಂದಿದ್ದು, ನಾಯಕರನ್ನು ಚಿಂತೆಗೀಡು ಮಾಡಿದೆ.
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
ಬೆಂಗಳೂರು ಪದವೀಧರ ಕ್ಷೇತ್ರ ಸೇರಿದಂತೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಪಸ್ವರ ಕೇಳಿದ್ದು ಅವರನ್ನು ಸಮಾಧಾನ ಪಡಿಸುವ ಕೆಲಸಕ್ಕೆ ನಾಯಕರು ಮುಂದಾಗಿದ್ದಾರೆ.
ಅದರಲ್ಲೂ ಮಾಜಿ ಶಾಸಕ ರಘುಪತಿ ಭಟ್ ಅವರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದು ತಮಗೆ ಟಿಕೆಟ್ ನಿರಾಕರಿಸಿ ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಟ್ಟ ಕ್ರಮದ ಬಗ್ಗೆ ತೀವ್ರ ಬೇಸರ ಹೊರಹಾಕಿದ್ದಾರೆ.
ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್, ರಾಜ್ಯನಾಯಕರು ಸುದೀರ್ಘ ಚರ್ಚೆ ನಡೆಸಿ ಎಲ್ಲಾ ಕ್ಷೇತ್ರಗಳಿಗೂ ತಲಾ ಮೂವರು ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ ಗೆ ರವಾನಿಸಲಾಗಿತ್ತು. ಈ ವಿಷಯದಲ್ಲಿ ರಾಜ್ಯ ನಾಯಕರು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇದು ಹೈಕಮಾಂಡ್ ನಿರ್ಧಾರವಾಗಿದ್ದು ಅದಕ್ಕೆ ಎಲ್ಲರೂ ತಲೆಬಾಗಬೇಕು ಎಂದು ಹೇಳಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಪಸ್ವರದ ಬಗ್ಗೆ ಹೈಕಮಾಂಡ್ ಗಮನಹರಿಸುತ್ತದೆ. ಅಂತಿಮವಾಗಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದೆ ಎಲ್ಲಾ ಆರೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ಮೂಲಕ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.




