ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಾವಣಗೆರೆ, ನೆಹರು ಯುವ ಕೇಂದ್ರ, ಎ.ವಿ. ಕಮಲಮ್ಮ ಮಹಿಳಾ ಕಾಲೇಜು, ದಾವಣಗೆರೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿ.10 ರಂದು ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜು, ಇಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಜಿಲ್ಲೆಯವರಾಗಿದ್ದು 15 ರಿಂದ 29 ವರ್ಷ ವಯೋಮಾನದವರಾಗಿರಬೇಕು. ಯುವಕ, ಯುವತಿಯರು, ಸಂಘ, ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಬಹುದು. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳು ಮಾತ್ರ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಛೇರಿಗೆ ಸಂಪರ್ಕಿಸುವುದು. ದೂ.ಸಂ: 08192-237480 ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕಿ ರೇಣುಕಾ ದೇವಿ ತಿಳಿಸಿದ್ದಾರೆ.


