ಬಳ್ಳಾರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾ ಶಾಲೆ, ಕ್ರೀಡಾ ನಿಲಯಕ್ಕೆ 2025-26ನೇ ಸಾಲಿನ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಬಾಲಕ ಮತ್ತು ಬಾಲಕಿಯರಿಗಾಗಿ ವಿವಿಧ ದಿನಗಳಂದು ನಡೆಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಗ್ರೇಸಿ ತಿಳಿಸಿದ್ದಾರೆ.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳ ದೈಹಿಕ ಪರೀಕ್ಷೆ ನಡೆಸಲಾಗುವುದು. ಭಾಗವಹಿಸುವ ಕ್ರೀಡಾ ಪಟುಗಳು 7ನೇ ಮತ್ತು 10 ತರಗತಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು.
7ನೇ ತರಗತಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು 01.06.20211 ನಂತರ ಜನಿಸಿರಬೇಕು. 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು 01.06.2007 ಜನಿಸಿರಬೇಕು. ಬಳ್ಳಾರಿ ಜಿಲ್ಲಾ ಮಟ್ಟದ ವಿವಿಧ ತಾಲ್ಲೂಕುಗಳಲ್ಲಿ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಕೆಳಗಿನಂತೆ ನಿಗದಿಪಡಿಸಲಾಗಿದೆ.
ಜ.08 ರಂದು ಬೆಳಿಗ್ಗೆ 11 ಗಂಟೆಗೆ ಸಿರುಗುಪ್ಪ ತಾಲ್ಲೂಕು ಕ್ರೀಡಾಂಗಣ ಮತ್ತು ಇತರೆ ಶಾಲೆಗಳಲ್ಲಿ ನಡೆಯಲಿದೆ. ಜ.09 ರಂದು ಬೆಳಿಗ್ಗೆ 11 ಗಂಟೆಗೆ ಕುರುಗೋಡು ಮತ್ತು ಕಂಪ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಇತರೆ ಶಾಲೆಗಳಲ್ಲಿ ನಡೆಯಲಿದೆ.
ಜ.10 ರಂದು ಬೆಳಿಗ್ಗೆ 11 ಗಂಟೆಗೆ ಸಂಡೂರು ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಎಪಿಎಂಸಿ ಮತ್ತು ಇತರೆ ಶಾಲೆಗಳಲ್ಲಿ, ಜ.11 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ತಾಲ್ಲೂಕು ಕ್ರೀಡಾಂಗಣ ಮತ್ತು ಇತರೆ ಶಾಲೆಗಳಲ್ಲಿ ನಡೆಸಲಾಗುವುದು.
ಜ.27 ಮತ್ತು 28 ರಂದು ಬೆಳಿಗ್ಗೆ 11 ಗಂಟೆಗೆ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯನ್ನು ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಕ್ರೀಡಾ ಶಾಲೆ, ಕ್ರೀಡಾ ನಿಲಯದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಆಯ್ಕೆಯಾದ ಕ್ರೀಡಾಪಟುಗಳು ವಿಭಾಗ ಮಟ್ಟದ ಕ್ರೀಡಾ ಶಾಲೆ, ಕ್ರೀಡಾ ನಿಲಯದ ಆಯ್ಕೆ ಪ್ರಕ್ರಿಯೆಗೆ ಜ.27 ಮತ್ತು 28 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಆಯ್ಕೆ ಪ್ರಕ್ರಿಯೆಗೆ ಅರ್ಹರಾಗಿರುತ್ತಾರೆ.
ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ಮತ್ತು ದಿನಭತ್ಯೆ ಇಲಾಖೆಯಿಂದ ನೀಡಲಾಗುವುದಿಲ್ಲ. ಆಯ್ಕೆ ಮಾಡಲಾಗುವ ಕ್ರೀಡೆಗಳು: ಅಥ್ಲೆಟಿಕ್ಸ್, ಹಾಕಿ, ಬಾಸ್ಕೆಟ್ಬಾಲ್, ವಾಲಿಬಾಲ್ ಮತ್ತು ಫುಟ್ಬಾಲ್.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಹಾಕಿ ತರಬೇತುದಾರಾದ ಎಂ.ಜಾಕೀರ್ (ಮೊ.9036335986), ಫುಟ್ಬಾಲ್ ತರಬೇತುದಾರರಾದ ಮಹ್ಮದ್ ಮಸೂದ್ (ಮೊ.9886688858) ಇವರಿಗೆ ಸಂಪರ್ಕಿಸಬಹುದು.


