ಚಿತ್ರದುರ್ಗ: 2024-25ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ-ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ-ಪುಡ್ ಕಾರ್ಟ್ ಯೋಜನೆಗಳಡಿ ನಿಗಮದ ವ್ಯಾಪಿಗೆ ಒಳಪಡುವ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.29 ರವರೆಗೆ ವಿಸ್ತರಿಸಲಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಂ.ತಿಮ್ಮರಾಯಪ್ಪ ತಿಳಿಸಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ರೂ.50 ಸಾವಿರ ಹಾಗೂ ಸಾಲ ರೂ.50 ಸಾವಿರ ಸೇರಿ ಒಟ್ಟು ಘಟಕ ವೆಚ್ಚ 1 ಲಕ್ಷ ಮಂಜೂರು ಮಾಡಲಾಗುವುದು. ಸ್ವಾವಲಂಬಿ ಸಾರಥಿ-ಪುಡ್ ಕಾರ್ಟ್ ಯೋಜನೆಯಡಿ ಪುಡ್ ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕುಗಳ ಸಹಯೋಗದೊಂದಿಗೆ ಯೋಜನೆ ಅನುಷ್ಠಾನಗೊಳಿಸಿ, ಸಾಲ ಮೊತ್ತಕ್ಕೆ ಶೇ.75ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.
2022-23 ಹಾಗೂ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.




