ಬೆಂಗಳೂರು: ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. ಇವರು 1882ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ ಎಂದರು.
ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ, ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ. ಮೂಲತ: ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದರು.
ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣ ಗೌಡರು ನನಗೆ ಪರಿಚಿತರು. ಕರ್ನಾಟಕದಲ್ಲಿ ಸುಮಾರು 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದು ಆಶಿಸುತ್ತೇನೆ ಎಂದರು.
ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂ.ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ ಇರುವ 50 ಲಕ್ಷ ರೂ.ಬೇಡಿಕೆಯನ್ನು ಸಹ ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದರು.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು. ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಗಾಧಾರ, ಯು. ಪಿ.ಶಿವಾನಂದ ಹಾಗೂ ಡಿ.ಎಸ್.ಆನಂದ ಅವರಿಗೆ ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದರು.




