ಮುಂಬೈ: ಬಾಲಿವುಡ್ ನ ಹಿರಿಯ ನಟಿ, ದಿಲೀಪ್ ಕುಮಾರ್ ಪತ್ನಿ ಸಾಯಿರಾ ಬಾನು ತೀವ್ರ ರಕ್ತದೊತ್ತಡ ಸಮಸ್ಯೆಯಿಂದಾಗಿ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರನ್ನು ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ರಕ್ತದೊತ್ತಡ ಏರಿದ ಪರಿಣಾಮದಿಂದ ಅವರನ್ನು ತೀವ್ರ ನಿಗಾ ಘಟಕಕ್ಕೆ ವರ್ಗಾಯಿಸಲಾಗಿದೆ.



