ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಅಧಿಕಾರಾವಧಿ ಪೂರೈಸಿದ ಬಳಿಕ ಸಂಪುಟ ಪುನಾರಚನೆ ಮಾಡಬೇಕು. ಈ ವೇಳೆ ಹಿರಿಯ ಸಚಿವರು ಎರಡನೇ ಹಂತದ ನಾಯಕರಿಗೆ ಅವಕಾಶ ಮಾಡಿಕೊಡಲು ತ್ಯಾಗಕ್ಕೆ ಸಿದ್ಧರಾಗಬೇಕು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಕರೆ ನೀಡಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಲವಾರು ಕಾರಣಗಳಿಂದ ಮೂರ್ನಾಲ್ಕು ಬಾರಿ ಗೆದ್ದಿರುವ ಶಾಸಕರಿಗೆ ಇನ್ನೂ ಅವಕಾಶಗಳು ಸಿಕ್ಕಿಲ್ಲ ಇವರಿಗೆ ಅವಕಾಶ ಕಲ್ಪಿಸಲು ತ್ಯಾಗ ಮಾಡಬೇಕು ಎಂದರು.
ಹೈಕಮಾಂಡ್ ಕೂಡಾ ಇದೇ ಚಿಂತನೆಯಲ್ಲಿ ಇದೆ. ಆದರೆ, ಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಅವರೇ ಮುಂದುವರೆಯಲಿದ್ದಾರೆ ಎಂದರು
2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಪಕ್ಷ ಕಟ್ಟಬೇಕಿದೆ. ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು, ಪಕ್ಷದ ಒಳಿತಿಗಾಗಿ ಅಭಿವೃದ್ಧಿ ಕೆಲಸಗಳ ಜೊತೆಗೆ ಎರಡನೇ ಹಂತದ ನಾಯಕರಿಗೆ ಅವಕಾಶ ಮಾಡಿಕೊಡಬೇಕು ಎಂದರು.
ನಾನು ಬಹಳ ಹಿಂದೆಯೇ ಸದುದ್ದೇಶದಿಂದ ಈ ಮಾತು ಹೇಳಿದ್ದೆ. ಆ ಮಾತಿಗೆ ನಾನು ಈಗಲೂ ಬದ್ಧ. ರಾಜಕೀಯವಾಗಿ ಪಕ್ಷ ಕಟ್ಟಬೇಕಾದರೆ ತ್ಯಾಗ ಮಾಡಲು ಸಿದ್ಧರಿರಬೇಕು. ಆದರೆ, ಅಂತಿಮವಾಗಿ ತೀರ್ಮಾನ ಮಾಡುವುದು ಹೈಕಮಾಂಡ್ ಎಂದರು.




