ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಕಾಲವಶ

5 years ago

ಬೆಂಗಳೂರು: ಹಿರಿಯ ಕವಿ ಡಾ. ಸಿದ್ದಲಿಂಗಯ್ಯ (67) ಕಾಲವಶರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಪೀಡಿತರಾಗಿದ್ದ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮಡಿದಿದ್ದಾರೆ.
ಅವರಿಗೆ ಚಿಕಿತ್ಸೆ ನೀಡಿದ್ದ ಮಣಿಪಾಲ್ ಆಸ್ಪತ್ರೆಯ ತಂಡ, 2021 ಮೇ 4ರಂದು ಕೊರೊನಾ ಮತ್ತು ಬಹುಅಂಗಾಂಗ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಐಸಿಯುನಲ್ಲಿ ಜೀವ ರಕ್ಷಕಗಳೊಂದಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಿಗೆ ನೀಡಲಾದ ಎಲ್ಲ ಅತ್ಯುತ್ತಮ ಚಿಕಿತ್ಸೆಗಳ ನಡುವೆ 11, ಜೂನ್, 2021ರಂದು ನಿಧನರಾಗಿದ್ದಾರೆ ಎಂದು ಹೇಳಿದೆ.

Leave a Reply