ಬೆಂಗಳೂರು: ದಾಸರಹಳ್ಳಿ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಕ್ಷೇತ್ರದ ಅಭ್ಯರ್ಥಿ ರಾಜೀವ್ಗೌಡ ಅವರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರನ್ನು ಇಲ್ಲಿಂದಲೂ ವಾಪಸ್ ಕಳುಹಿಸಬೇಕು ಎಂದು ಮನವಿ ಮಾಡಿದರು.
ನಾಡಿನ ಜನತೆಯ ತೆರಿಗೆ ಹಣದ ಪಾಲಿನಲ್ಲಿ ರಾಜ್ಯಕ್ಕೆ ವಿಪರೀತ ಅನ್ಯಾಯ ಮಾಡಿದರು. ರಾಜ್ಯದ ಜನತೆ ಪ್ರವಾಹದಿಂದ, ಬರಗಾಲದಲ್ಲಿ ನರಳುವಾಗ ಮೋದಿ, ಅಮಿತ್ ಶಾ ನೆಪಕ್ಕೂ ರಾಜ್ಯಕ್ಕೆ ಕಾಲಿಡಲಿಲ್ಲ. ರಾಜ್ಯದ ಪಾಲಿನ ಬರ ಪರಿಹಾರದ ಹಣವನ್ನು ಇವತ್ತಿನವರೆಗೂ ಒಂದೇ ಒಂದು ರೂಪಾಯಿ ನೀಡಲಿಲ್ಲ. ಹೀಗೆ ನಿರಂತರವಾಗಿ ರಾಜ್ಯದ ಜನತೆಗೆ ಮಹಾದ್ರೋಹ ಎಸಗಿದ ಬಿಜೆಪಿಯನ್ನು ಸೋಲಿಸಿ 7 ಕೋಟಿ ಕನ್ನಡಿಗರು ಸ್ವಾಭಿಮಾನ ಮೆರೆಯಬೇಕು ಎಂದರು.




