ಕೆಪಿಸಿಸಿ ವಾರ್ ರೂಂ ಮುಖ್ಯಸ್ಥರಾಗಿ ಸೆಂಥಿಲ್ ನೇಮಕ

4 years ago

ದೆಹಲಿ: ಮುಂಬರುವ 2023ರ ರಾಜ್ಯ ವಿಧಾನ ಸಭಾ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಾರ್ ರೂಮ್ ಮುಖ್ಯಸ್ಥರಾಗಿ ಮಾಜಿ ಐಎಎಸ್ ಅಧಿಕಾರಿ ಮತ್ತು ಕಾಂಗ್ರೆಸ್ ನಾಯಕ ಸಸಿಕಾಂತ್ ಸೆಂಥಿಲ್ ಅವರನ್ನು ಎಐಸಿಸಿ ನೇಮಿಸಿದೆ. ಜೊತೆಗೆ, ಸುನೀಲ್ ತಾನುಗೋಲು ಅವರು ಒಟ್ಟು ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ. ಕೆಪಿಸಿಸಿ ಉಸ್ತುವಾರಿ ಸೂರಜ್ ಹೆಗಡೆ ಹಾಗು ಪ್ರಧಾನ ಕಾರ್ಯದರ್ಶಿ ಮೆಹರೋಜ್ ಖಾನ್ ವಾರ್ ರೂಮ್ ನ ಪ್ರತಿದಿನದ ಚಟುವಟಿಕೆಗಳನ್ನು ನೋಡಿಕೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಸಸಿಕಾಂತ್ ಸೆಂಥಿಲ್, ರಾಹುಲ್ ಗಾಂಧಿಯವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ನನ್ನನ್ನು ನಂಬಿ ದೊಡ್ಡ ಜವಾಬ್ದಾರಿಯನ್ನು ಕೊಟ್ಟಿರುವುದಕ್ಕೆ ಸಂತಸವನ್ನು ಹಂಚಿಕೊಂಡಿದ್ದಾರೆ.

https://www.facebook.com/photo?fbid=428324755975516&set=a.351100930364566

Leave a Reply