ಮಂಗಳೂರು: ಆಗಿಂದಾಗ್ಗೆ ಕೋಮುಗಲಭೆಗಳು ನಡೆಯುವ ಮೂಲಕ ಉದ್ವಿಗ್ನ ಗೊಳ್ಳುತ್ತಿರುವ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಸೀಮಿತವಾಗಿ ಪ್ರತ್ಯೇಕ ಕೋಮು ವಿರೋಧಿ ಕಾರ್ಯಪಡೆ(ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕರಾವಳಿ ಜಿಲ್ಲೆಗಳ ಕಾನೂನು ವ್ಯವಸ್ಥೆ ಕುರಿತಂತೆ ಮಂಗಳೂರಿನಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ
ಗೃಹ ಸಚಿವ ಡಾ. ಜಿ ಪರಮೇಶ್ವರ್, ಈ ಕಾರ್ಯ ಪಡೆಯ ಮೂಲಕ ಕೋಮು ಸಂಘರ್ಷ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಎರಡು ವಾರಗಳಲ್ಲಿ ಆರಂಭವಾಗಲಿದೆ. ಈ ಟಾಸ್ಕ್ ಫೋರ್ಸ್ ಪೊಲೀಸರ ಜೊತೆಗೂಡಿ ಕಾರ್ಯನಿರ್ವಹಿಸಲಿದೆ ಎಂದರು.
ಕೋಮು ಗಲಭೆಗೆ ಕಾರಣವಾಗುವ ರೀತಿಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾನೂನು ಸುವ್ಯವಸ್ಥೆಗೆ ಭಂಗ ತರುವವರು ಯಾರೇ ಆದರೂ ಕೂಡ ತಪ್ಪಿತಸ್ಥರಾಗುತ್ತಾರೆ. ಇಂತಹ ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ. ಯಾವುದೇ ಸಮುದಾಯದವರು ಆಗಲೀ, ಕಾನೂನು ಉಲ್ಲಂಘನೆ ಮಾಡಲು ಬಿಡುವುದಿಲ್ಲ. ಇನ್ನು ಮುಂದೆ ಇಂತಹ ಘಟನೆಗಳು ಜಿಲ್ಲೆಯಲ್ಲಿ ನಡೆಯಬಾರದು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಬಿಡುವುದಿಲ್ಲ ಎಂದರು.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸಭೆಯ ವೇಳೆ ಮುಸ್ಲಿಂ ಮುಖಂಡರು ಗದ್ದಲ ಸೃಷ್ಟಿಸಿದರು. ಗೃಹ ಸಚಿವರ ಜೊತೆ ಚರ್ಚಿಸಲು ತೆರಳಿದ್ದ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರು ಟೇಬಲ್ ಬಡೆದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಶ್ರಫ್ ಕೊಲೆ ಬಗ್ಗೆ ಸ್ಥಳೀಯರಿಂದ ಪರಮೇಶ್ವರ ಮಾಹಿತಿ ಪಡೆದರು.




