ಬಳ್ಳಾರಿ: ಸರ್ಕಾರಿ ಹುದ್ದೆಗೆ ನೇಮಕಗೊಂಡಿರುವ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಗೌರವ ತರಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಹೇಳಿದರು.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ 88ನೇ ಸಾಮಾನ್ಯ ಬುನಾದಿ ತರಬೇತಿಯ ಅಭ್ಯರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸರ್ಕಾರಿ ಕೆಲಸ-ಕಾರ್ಯಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಸಮಯ ಪಾಲನೆ ಹೊಂದಬೇಕು. ನಿಸ್ವಾರ್ಥ ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದ ಅವರು, ಶುಭವಾಗಲಿ ಎಂದರು.
ಈ ವೇಳೆ ಜಿಲ್ಲಾ ತರಬೇತಿ ಸಂಸ್ಥೆಯ ಉಪಪ್ರಾಚಾರ್ಯ ಶೇಷಗಿರಿ ನಾಯ್ಕ ಸೇರಿದಂತೆ ಅಭ್ಯರ್ಥಿಗಳು ಹಾಜರಿದ್ದರು.




