ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಮಾಹಿತಿ ನೀಡಲು 20 ಮಳಿಗೆಗಳ ಸ್ಥಾಪನೆ

2 years ago

ಧಾರವಾಡ: ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಜನಪರ ಯೋಜನೆಗಳನ್ನು ಜನರಿಗೆ ಪರಿಚಯಿಸಿ, ಫಲಾನುಭವ ಪಡೆಯಲು ಅನುಕೂಲವಾಗುವಂತೆ ಸುಮಾರು 20 ಮಾಹಿತಿ ಮಳಿಗೆಗಳನ್ನು ಸ್ಥಾಪಿಸಲಾಗಿದೆ.

ಪ್ರಮುಖವಾಗಿ ರಾಜ್ಯ ಸರ್ಕಾರದ ಪಂಚ ಯೋಜನೆಗಳ ಪರಿಚಯದೊಂದಿಗೆ ಇತರ ಇಲಾಖೆಗಳ ಪ್ರಮುಖ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಮಾಹಿತಿ ಮಳಿಗೆಗಳು ಸಹಾಯಕವಾಗಲಿವೆ. ಹೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎನ್‍ಡಬ್ಲ್ಯೂಕೆಎಸ್‍ಆರ್‍ಟಿಸಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೈಗಾರಿಕೆ ಇಲಾಖೆ, ಕೃಷಿ, ತೋಟಗಾರಿಕೆ, ಪೆÇಲೀಸ್, ಪಂಚಾಯತ್ ರಾಜ್, ಮಹಾನಗರ ಪಾಲಿಕೆ ಹಾಗೂ ಇತರ ಇಲಾಖೆಗಳು ಮಳಿಗೆಗಳನ್ನು ಸ್ಥಾಪಿಸಿವೆ.

ಅಲ್ಲದೇ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ವಿವಿಧ ಸರ್ಕಾರೇತರ ಸಂಸ್ಥೆಗಳಿಗೂ ಮಳಿಗೆಗಳನ್ನು ನೀಡಲಾಗಿದೆ. ಮುಖ್ಯವಾಗಿ ಮಹಿಳಾ ಗುಂಪು, ಸ್ವಸಹಾಯ ಸಂಘಗಳು, ಸ್ವಯಂ ಉದ್ಯೋಗದಾತರು ಈ ಮಳಿಗೆಗಳನ್ನು ಸ್ಥಾಪಿಸಿದ್ದಾರೆ. ಬಟ್ಟೆ ಮತ್ತು ನಾರಿನ ಬ್ಯಾಗ್ ತಯಾರಿಕೆ, ಕರಕುಶಲ, ಸಾವಯವ ಉತ್ಪನ್ನಗಳು, ಸಿರಿಧಾನ್ಯ ಉತ್ಪನ್ನಗಳು, ಕೆಎಂಎಫ್, ಗಾಮೆರ್ಂಟ್ಸ್, ಸಿಹಿತಿನಿಸುಗಳ ತಯಾರಿಕಾ ಕೇಂದ್ರ, ಹ್ಯಾಂಡಿಕ್ರಾಫ್ಟ್ ಸೇರಿದಂತೆ ವಿವಿಧ ಮಳಿಗೆಗಳನ್ನು ತೆರೆಯಲಾಗಿದೆ ಎಂದು  ಮೇಲುಸ್ತುವಾರಿ ವಹಿಸಿರುವ ಹಿರಿಯ ಅಧಿಕಾರಿಗಳಾದ ಡಾ.ಸಂತೋಷಕುಮಾರ ಬಿರಾದಾರ ಮತ್ತು ಡಾ. ಭೀಮಪ್ಪ ಅವರು ತಿಳಿಸಿದರು.

Leave a Reply