ಕೆಪಿಸಿಸಿ ಸೇವಾದಳ ರಾಜ್ಯ ಮಹಿಳಾ ಕಾರ್ಯಕಾರಿಣಿ ಸಭೆ
ಕೆಪಿಸಿಸಿ ಭಾರತ್ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಸೇವಾದಳ ವತಿಯಿಂದ ರಾಜ್ಯ ಮಹಿಳಾ ಕಾರ್ಯಕಾರಿಣಿ ಸಭೆ
ಬೆಂಗಳೂರು: ಸೇವಾದಳ ರಾಜ್ಯಾಧ್ಯಕ್ಷ ಎಂ.ರಾಮಚಂದ್ರ ಅಧ್ಯಕ್ಷತೆಯಲ್ಲಿ ಸೇವಾದಳ ಮಹಿಳಾ ರಾಜ್ಯಾಧ್ಯಕ್ಷರಾದ ಗಿರೀಜಾ ಹೂಗಾರ್ ರಾಜ್ಯ ಸೇವಾದಳ ಮಹಿಳಾ ಕಾರ್ಯಕಾರಿಣಿ ಸಭೆ ನಡೆಯಿತು.
- ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
ಇದೇ ಸಂದರ್ಭದಲ್ಲಿ ಮಾತನಾಡಿದ ಎಂ.ರಾಮಚಂದ್ರ, ಕಾಂಗ್ರೆಸ್ ಪಕ್ಷದಲ್ಲಿ ಗ್ರಾಮ ಪಂಚಾಯಿತಿಯಿಂದ ಹಿಡಿದು ಪ್ರಧಾನಿ ಹುದ್ದೆವರೆಗೆ ಮಹಿಳೆಯರು ನೇಮಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಸೇವಾದಳ ವಿಭಾಗ ಎಂದರೆ ಶಿಸ್ತ್ರು, ಸೇವೆ ಎರಡು ನಮ್ಮ ಉದ್ದೇಶವಾಗಿದೆ ಎಂದರು.
ಕಾಂಗ್ರೆಸ್ ಸೇವಾದಳ ರಾಜ್ಯಾದ್ಯಂತ ಉತ್ತಮ ಸಂಘಟನೆ ಮಾಡಲಾಗಿದೆ, ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಹಾಗೂ ಭಾರತ್ ಜೋಡೋ, ಮೇಕೆದಾಟು ಪಾದಯಾತ್ರೆ ಸೇವಾದಳ ಮುಖಂಡರು, ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ಸೇವಾದಳದ ಕಾರ್ಯಕರ್ತರನ್ನು ಗುರುತಿಸಿ ಉತ್ತಮ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.
ಆಗಸ್ಟ್ ತಿಂಗಳಲ್ಲಿ ಫಟಪ್ರಭದಲ್ಲಿ ಸೇವಾದಳ ಸಂಸ್ಥಾಪಕ ನಾ.ಸು.ಹರ್ಡಿಕರ್ ಪುಣ್ಯಸ್ಮರಣೆ ಕಾರ್ಯಕ್ರಮ ಮತ್ತು ರಾಜ್ಯಮಟ್ಟದ ಸೇವಾದಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.
ಸೇವಾದಳ ಮಹಿಳಾ ಅಧ್ಯಕ್ಷರಾದ ಗಿರೀಜಾ ಹೂಗಾರ್ ಮಾತನಾಡಿ, ಸೇವಾದಳದ ಎಂದರೆ ಸೇವಾ ಮನೋಭಾವನೆ ಜನರ ಸೇವೆ ಮಾಡುವುದು. ಸೇವಾದಳದ ಮಹಿಳಾ ಕಾರ್ಯಕರ್ತರು ರಾಜ್ಯಾದ್ಯಂತ ಸಂಘಟನೆ ಮಾಡಲಾಗುತ್ತಿದೆ. ಮುಂಬರುವ ಜಿಲ್ಲಾ ಪಂಚಾಯಿತಿ, ಮಹನಗರ ಪಾಲಿಕೆ ಚುನಾವಣೆಗಳಲ್ಲಿ ಸೇವಾದಳ ಮಹಿಳಾ ಕಾರ್ಯಕರ್ತೆಯರಿಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಲಾಗುವುದು ಎಂದರು.
ಹೆಣ್ಣು ಅಬಲೆ ಅಲ್ಲ, ಸಬಲೆ ರಾಜಕೀಯ ಕ್ಷೇತ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಶೇಕಡ 50ರಷ್ಟು ಮೀಸಲಾತಿ ಇದೆ, ಮುಂದಿನ ದಿನಗಳಲ್ಲಿ ವಿಧಾನಸಭೆಯಲ್ಲಿಯು ಸಹ ಶೇಕಡ 33ರಷ್ಟು ಮಹಿಳಾ ಮೀಸಲಾತಿ ಇದೆ. ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಉತ್ತಮ ಅವಕಾಶವಿದೆ ಎಂದರು.
ಕಾರ್ಯಾಧ್ಯಕ್ಷ ವಿ ಬಿ ತುಳಸಿಗೇರಿ, ಸೇವಾದಳ ಉಪಾಧ್ಯಕ್ಷ ಜಾಕೀರ್ ಹುಸೇನ್, ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಸಮುದ್, ತೇರಸಾ ವಿಕ್ಟರ್, ಕಾರ್ಯದರ್ಶಿ ಪದ್ಮಕ್ಕರ್ ನಾಯ್ಕ್, ಮಂಜುಳ ಭೂಸರೆ, ಸೇವಾದಳ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.




