ಭೀಕರ ಅಪಘಾತ: ಏಳು ಜನರ ಬಲಿ

4 years ago

ರಾಯ್ ಪುರ: ಛತ್ತೀಸ್ ಗಢದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಜನ ಬಲಿಯಾಗಿದ್ದಾರೆ. ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದಿದೆ. ಛತ್ತೀಸ್ ಗಢದ ಕೂರ್ಬಾ ಜಿಲ್ಲೆಯಲ್ಲಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಛತ್ತೀಸ್ ಗಢದ ಬಂಗೋ ಪೊಲೀಸ್ ಠಾಣಾ ವ್ಯಾಪ್ತಿಯ ಮದಾಯಿ ಘಾಟ್ ಬಳಿ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬಸ್ ನ್ನು ಬದಿಗೆ ಚಲಿಸಿದ್ದಾರೆ. ಆಗ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಂತೋಷ್ ಸಿಂಗ್ ಮಾಹಿತಿ ನೀಡಿದ್ದಾರೆ.

Leave a Reply