ಬೆಂಗಳೂರು: ಮಲಯಾಳಂ ಸಿನಿಮಾ ರಂಗದಲ್ಲಿ ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ದೊಡ್ಡ ರೀತಿಯ ಸಂಚಲನ ಮೂಡಿಸಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಇಂತಹುದೇ ಸಮಿತಿ ರಚನೆಯಾಗಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 16ರಂದು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ಸಭೆ ಕರೆದಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ದೊಡ್ಡ ವಿವಾದ ಸೃಷ್ಟಿಸಿದ ಬೆನ್ನೆಲ್ಲೇ ತೆಲುಗು ಚಿತ್ರರಂಗದಲ್ಲೂ ಕಲಾವಿದರಿಗೆ ಲೈಂಗಿಕ ಕಿರುಕುಳ ನೀಡಿದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ .
ಇದೀಗ ಕನ್ನಡ ಚಿತ್ರರಂಗದ ಹಲವು ಗಣ್ಯರು ಮತ್ತು ವಿವಿಧ ವರ್ಗಗಳ ಪ್ರಮುಖರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕನ್ನಡ ಸಿನಿಮಾ ರಂಗದಲ್ಲಿ ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನಕ್ಕೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಮನವಿ ಮಾಡಿದ್ದರು.
ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (ಫೈರ್) ನಿಯೋಗ ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನಕ್ಕೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಒತ್ತಾಯಿಸಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬೆನ್ನಲ್ಲೇ ಚಿತ್ರರಂಗದ ಎಲ್ಲರನ್ನೂ ಒಟ್ಟುಗೂಡಿಸಿ ಸಭೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಶುಕ್ರವಾರ ಸೂಚಿಸಿತ್ತು.
ಚಿತ್ರರಂಗದ ನಟಿಯರನ್ನು ಆಹ್ವಾನಿಸಿ ಅವರ ಸಮ್ಮುಖದಲ್ಲಿ ಚಿತ್ರರಂಗದ ಪ್ರಮುಖರೊಂದಿಗೆ ಸಭೆ ನಡೆಸಿ, ಸಮಿತಿ ರಚಿಸಲು ಒತ್ತಾಯಿಸುವಂತೆ ತೀರ್ಮಾನ ತೆಗೆದುಕೊಳ್ಳಿ ಎಂದು ಮಹಿಳಾ ಆಯೋಗ ವಾಣಿಜ್ಯ ಮಂಡಳಿಗೆ ಸಲಹೆ ನೀಡಿದೆ.
ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ಪ್ರಮುಖ ಗಣ್ಯರು ಹಿರಿಯ ಕಲಾವಿದರು ಸೇರಿದಂತೆ ಹಲವು ಹಿತೈಷಿಗಳೊಂದಿಗೆ ಸಮಾಲೋಚನೆ ನಡೆಸಲು ನಿರ್ಧರಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ, ಸೆಪ್ಟಂಬರ್ 16 ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಕಲಾವಿದೆಯರು ಹಾಗೂ ಚಿತ್ರರಂಗದ ಪ್ರಮುಖರ ಸಭೆ ನಡೆಸಲಿದೆ.




