ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ 7 ಲಕ್ಷ ಸರ್ಕಾರಿ ನೌಕರರು ಇದ್ದಾರೆ. ಅವರನ್ನು ಪ್ರತಿನಿಧಿಸುವ ಸಂಸ್ಥೆ ರಾಜ್ಯ ಸರ್ಕಾರಿ ನೌಕರರ ಸಂಘವಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಶಿವರುದ್ರಯ್ಯ ವಿ.ವಿ. ಹೇಳಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಪ್ರಜಾಸತ್ಮಾತಕ ನೌಕರರ ವೇದಿಕೆ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿರವರು ಏಕಪಕ್ಷೀಯವಾಗಿ ನಿರ್ಧಾರ, ಸರ್ವಾಧಿಕಾರಿ ಧೋರಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಚುನಾವಣೆ ನಡೆದು ಅಧಿಕಾರ ಸ್ವೀಕಾರ ಮಾಡಿ ಒಂದು ವಾರವಾಗಿದೆ. ತರಾತುರಿಯಲ್ಲಿ ಮೂರು ಸ್ಥಾನಗಳ ನೇಮಕ ಮಾಡಿ ಆದೇಶ ಮಾಡಿದ್ದಾರೆ. ಚುನಾಯಿತ ಖಜಾಂಚಿಯಾಗಿರುವ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ. ಚರ್ಚೆ ಮಾಡಿ ತೀರ್ಮಾನ ಮಾಡಬೇಕಾದ ವಿಷಯವನ್ನು ಚರ್ಚೆ ಮಾಡದೇ ಏಕಪಕ್ಷೀಯ ನಿರ್ಧಾರ ಮಾಡಿ, ನೇಮಕ ಮಾಡಿದ್ದಾರೆ ಎಂದರು.
ನೌಕರರ ಸಂಘದಲ್ಲಿ ಸಮನ್ವಯತೆ ಇರಬೇಕು. ಇಲ್ಲದೇ ಹೋದರೆ ಕಷ್ಟ. ಅಧ್ಯಕ್ಷರ ಸರ್ವಾಧಿಕಾರಿ ಧೋರಣೆಯಿಂದ ಸರ್ಕಾರಿ ನೌಕರರಿಗೆ ಸಂಕಷ್ಟವಾಗಲಿದೆ. ಸರ್ಕಾರಿ ನೌಕರರ ಸಂಘದಲ್ಲಿ ಪ್ರತಿ ಪಕ್ಷದವರನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ ಎಂದರು.
ಎನ್.ಪಿ.ಎಸ್. ಜಾರಿ ಮತ್ತು ನೌಕರರ ಹಿತರಕ್ಷಣೆ ಮುಖ್ಯ ಈ ನಿಟ್ಟಿನಲ್ಲಿ ಅಧ್ಯಕ್ಷರಾದ ಷಡಕ್ಷರಿರವರು ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಹಾಸನ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ.ಕೃಷ್ಣೇಗೌಡರವರು ಮತ್ತು ಸರ್ಕಾರಿ ನೌಕರರ ಎಸ್.ಸಿ/ಎಸ್.ಟಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.




