ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ, ಆಧುನಿಕ ಹೈನುಗಾರಿಕೆ, ತರಬೇತಿ ಆಯೋಜಿಸಲಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಜ.20 ಮತ್ತು 21 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ, 30 ಮತ್ತು 31 ರಂದು ಆಧುನಿಕ ಹೈನುಗಾರಿಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಿದ್ದು, ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.




