ಜಿಲ್ಲಾ ಪಂಚಾಯತ್ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಹೇಳಿಕೆ
ಶಿವಮೊಗ್ಗ: ಶಿವಮೊಗ್ಗ ಸಂಪದ್ಭರಿತ ಜಿಲ್ಲೆಯಾಗಿದ್ದು, ಇಲ್ಲಿ ಸ್ವಉದ್ಯೋಗ ಮಾಡಲು ಬಹಳ ಅವಕಾಶಗಳಿವೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಈ ನಿಟ್ಟಿನಲ್ಲಿ ಕೆಲಸವನ್ನು ಮಾಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಸಿಇಓ ಲೋಕಂಡೆ ಸ್ನೇಹಲ್ ಸುಧಾಕರ್ ತಿಳಿಸಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಪಶು ಸಖಿ ಮತ್ತು ಬ್ಯೂಟಿಪಾರ್ಲರ್ ಮ್ಯಾನೆಜ್ಮೇಂಟ್ ತರಬೇತಿ ಕಾರ್ಯಕ್ರಮದ ಉದ್ಘಾಟನ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಸಂಸ್ಥೆಯ ನಿರ್ದೇಶಕ ಕಾಂತೇಶ ಅಂಬಿಗಾರ್ ಮಾತನಾಡಿ, ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದ್ದಂತೆ. ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕು ಎಂದರು. ಜೊತೆಗೆ, ಸಂಸ್ಥೆಯ ಕಿರು ಪರಿಚಯ ಮಾಡಿಕೊಟ್ಟರು.
ಉಪನ್ಯಾಸಕ ಸುರೇಶ್ ವೈ ಹಳ್ಳಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿವಯೋಗಿ ಯೆಲಿ, ಉಪ ನಿರ್ದೇಶಕರು, ಪಶು ವೈದ್ಯಕೀಯ ಇಲಾಖೆ ಶಿವಮೊಗ್ಗ ಇವರು ಪಶು ಇಲಾಖೆಯ ಬಗ್ಗೆ ಮತ್ತು ಪಶು ಸಖಿಯರ ಕಾರ್ಯ ವೈಖರಿಯ ಬಗ್ಗೆ ಮಾಹಿತಿ ನೀಡಿದರು. ಡೋಮೈನ್ ಸ್ಕೀಲ್ ಟ್ರೈನರ್ ಆದಂತಹ ಕತ್ಮುನಿಸಾ ಮತ್ತು ದೀಪಾ ಹಾಜರಿದ್ದರು.




