ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಮೊದಲು ತಮ್ಮ ಸರ್ಕಾರ ಉಳಿಸಿಕೊಳ್ಳಲಿ ಎಂದಿರುವ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್, ಜೂನ್ ಮೊದಲ ವಾರದ ನಂತರ ಶಿಂಧೆ ಅವರ ಸರಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ ಎಂದು ಅವರು ಭವಿಷ್ಯ ಹೇಳಿದರು.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಪತನವಾಗಲಿದೆ ಎನ್ನುವ ಶಿಂಧೆ ಅವರು, ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದರು.
ಲೋಕಸಭಾ ಚುನಾವಣೆ ನಂತರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪತನಾಗುವುದು ಎಂಬುದು ಭ್ರಮೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ ಎಂದರು.
ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದರು.
ಏಕನಾಥ ಶಿಂಧೆಗೆ ಶಕ್ತಿ ಇದ್ದರೆ ನಮ್ಮ ಐದು ಶಾಸಕರನ್ನು ಮೊದಲು ತಮ್ಮತ್ತ ಸೆಳೆದುಕೊಂಡು ತೋರಿಸಲಿ. ಇನ್ನು ಒಂದೆರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಸರಕಾರ ಬರಲಿದೆ ಎಂದರು.




