ಕೊಪ್ಪಳ: ಕೊಪ್ಪಳ ಮೆಡಿಕಲ್ ಕಾಲೇಜಿನ ಪಕ್ಕದಲ್ಲಿ ನೂತವಾಗಿ ಆರಂಭವಾಗುತ್ತಿರುವ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 450 ಹಾಸಿಗೆಯ ಆಸ್ಪತ್ರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್ ತಂಗಡಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ನೂತನ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಅವರು, ಈ ಆಸ್ಪತ್ರೆಯನ್ನು ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು. ಇದರ ಕೆಲಸ ಆದಷ್ಟು ಬೇಗನೆ ಮುಗಿಯಬೇಕು. ಉಳಿದ ಇತರೆ ಸಣ್ಣ ಪುಟ್ಟ ಕೆಲಸಗಳನ್ನು ಜನವರಿ 20 ರೊಳಗಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕಿಮ್ಸ ನಿರ್ದೇಶಕರು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಫೆಬ್ರವರಿ ಮೊದಲ ಅಥವಾ ಎರಡನೇ ವಾರದಲ್ಲಿ ಈ ಆಸ್ಪತ್ರೆ ಉದ್ಘಾಟನೆ ಮಾಡಲಾಗುವುದು. ಆಸ್ಪತ್ರೆಯ ಎಲ್ಲಾ ವಿಭಾಗಗಳ ಕೆಲಸ ಮತ್ತು ಕಾರ್ಯಗಳು ಉತ್ತಮ ಗುಣಮಟ್ಟದ ರೀತಿಯಲ್ಲಿ ಮಾಡಬೇಕು. 450 ಬೆಡ್‌ಗಳ ಈ ಆಸ್ಪತ್ರೆಯಿಂದ ನಮ್ಮ ಭಾಗದ ಜನರಿಗೆ ಒಳ್ಳೆಯ ಆರೋಗ್ಯ ಸೇವೆ ಸಿಗಲಿದೆ ಎಂದರು.
ಈ ಸಂದರ್ಭದಲ್ಲಿ ಸಂಸದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಶಾಸಕರ ಕೆ.ರಾಘವೇಂದ್ರ ಹಿಟ್ನಾಳ್, ಕೊಪ್ಪಳ ನಗರಸಭೆ ಅಧ್ಯಕ್ಷ ಅಮಜದ್ ಪಟೇಲ್, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಕೊಪ್ಪಳ ಕಿಮ್ಸ್ ನಿರ್ದೇಶಕ ಡಾ.ವಿಜಯನಾಥ ಇಟಗಿ, ಕಿಮ್ಸ್ ಮುಖ್ಯ ಆಡಳಿತಾಧಿಕಾರಿ ಬಿ.ಕಲ್ಲೇಶ್ ಸೇರಿದಂತೆ ಇತರರು ಹಾಜರಿದ್ದರು.




