ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮಾಡಿರುವ ಆಗ್ರಹ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕೆಲವು ಕಡತಗಳನ್ನು ಸಚಿವ ಭೈರತಿ ಸುರೇಶ್ ಸುಟ್ಟುಹಾಕಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದರು.
ಇದಕ್ಕೆ ಉತ್ತರ ನೀಡಿದ ಸಚಿವ ಭೈರತಿ ಸುರೇಶ್, ‘ಯಡಿಯೂರಪ್ಪ ಒಳ್ಳೆಯವರು. ಆದರೆ ಅವರ ಪತ್ನಿ ಮೈತ್ರಾದೇವಿ ಅವರ ಸಾವು ಹೇಗಾಯಿತು? ಅವರ ಸಾವಿನ ವಿಚಾರದಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ಗೃಹ ಸಚಿವರು, ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಿ ಎಂದಿದ್ದರು.
ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸೇರಿದಂತೆ ಹಲವು ಬಿಜೆಪಿ ನಾಯಕರು ಸಚಿವ ಬೈರತಿ ಸುರೇಶ್ ವಿರುದ್ಧ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ.
ಅದರಲ್ಲೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಂತು ತಮ್ಮ ವಿರುದ್ಧದ ಆರೋಪಕ್ಕೆ ಕೆಂಡಾಮಂಡಲರಾಗಿದ್ದು ಸಚಿವ ಸುರೇಶ್ ಅವರನ್ನು ದರೋಡೆಕೋರ ಎಂದು ಕರೆಯುವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಭೈರತಿ ಸುರೇಶ್ ದರೋಡೆಕೋರ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹಾಳು ಮಾಡಿದವರು. ಅವರನ್ನು ಹೆಬ್ಬಾಳದಿಂದ ಓಡಿಸುತ್ತೇವೆ ಎಂದರು.
ಮಹಾಭಾರತದಲ್ಲಿ ಕೌರವರನ್ನು ಶಕುನಿ ಮುಗಿಸಿದ ಹಾಗೇ ಸಿಎಂ ಸಿದ್ದರಾಮಯ್ಯರನ್ನು ಮುಗಿಸಲು ಸಚಿವ ಭೈರತಿ ಸುರೇಶ್ ಪಣತೊಟ್ಟಿದ್ದಾರೆ. ಭೈರತಿ ಸುರೇಶ್ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಪ್ಪು ಮಾಡಿದ್ದಾರೆ. ಆ ಭಯದಿಂದ ನನ್ನ ಮೇಲೆ ಆರೋಪಿಸುತ್ತಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಸಾವಿಗೆ ಸುರೇಶ್ ಅವರೇ ಕಾರಣ ಅಂತ ಜನರು ಮಾತನಾಡುತ್ತಿದ್ದಾರೆ. ನಾನು ಆ ಮಾತನ್ನು ಹೇಳಲಾ? ಮಾತಾಡುವ ಮುಂಚೆ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡಬೇಕು. ಇವರೇ ಸಿಎಂ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಕಳಂಕ ತಂದಿದ್ದಾರೆ. ಹೀಗಾಗಿರುವ ಭೈರತಿ ಸುರೇಶ್ ನನ್ನ ಬಗ್ಗೆ ಮಾತನಾಡಿ ಕೆಳಮಟ್ಟದ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಸಲಹೆ ನೀಡಿದರು.




