ಶಿವಮೊಗ್ಗದಲ್ಲಿ ಕೋಮು ರಾಜಕೀಯದ ಪ್ರಯೋಗಶಾಲೆಯ ಶಾಖೆ: ಕೆಪಿಸಿಸಿ

4 years ago

ಶಿವಮೊಗ್ಗದಲ್ಲಿ ಕೋಮು ರಾಜಕೀಯದ ಪ್ರಯೋಗಶಾಲೆಯ ಶಾಖೆ: ಕೆಪಿಸಿಸಿ

ಬೆಂಗಳೂರು: ಕೋಮು ಗಲಭೆಯಂತಹ ಘಟನೆಗಳಿಗೆ ಆರಂಭದಲ್ಲಿಯೇ ಕಡಿವಾಣ ಹಾಕಿದ್ದರೆ ರಾಜ್ಯ ಇಂತಹ ಆತಂಕಕಾರಿ ದಿನಗಳನ್ನು ನೋಡುವ ಸ್ಥಿತಿ ಬರುತ್ತಿರಲಿಲ್ಲ ಎಂದು ಕೆಪಿಸಿಸಿ ಹೇಳಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಕೊಲೆಗಳ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ, ಈಗ ಎಷ್ಟರ ಮಟ್ಟಿಗೆ ಪರಿಸ್ಥಿತಿ ಹದಗೆಟ್ಟಿದೆ ಎಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿ ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆಯನ್ನು ಹುಟ್ಟಿಸಬೇಕಾಗಿದ್ದ ಗೃಹಸಚಿವರ ತವರು ಜಿಲ್ಲೆಯಲ್ಲೇ ನಿರಂತರವಾಗಿ ಗಲಭೆ ನಡೆಯುತ್ತಿವೆ ಎಂದಿದೆ.

ಜನರು ಆತಂಕದಿಂದ ಬದುಕುವಂತ ಸ್ಥಿತಿ ನಿರ್ಮಾಣವಾಗಿದೆ. ಹಾಗಿದ್ದರೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕನಿಷ್ಠ ಪ್ರಯತ್ನ ಮಾಡದೇ ಇರುವುದು ಸಚಿವರ ಅಸಾಮರ್ಥ್ಯವೋ ಅಥವಾ ಕೋಮು ಕಲಹಕ್ಕೆ ನೀಡುತ್ತಿರುವ ಉದ್ದೇಶಪೂರ್ವಕ ಕುಮ್ಮಕ್ಕೊ? ಎಂದು ಪ್ರಶ್ನಿಸಿದೆ.

ರಾಜ್ಯದ ಗೃಹ ಸಚಿವರ ತವರು ಜಿಲ್ಲೆಯಲ್ಲೇ ಇಂತಹ ಘಟನೆಗಳು ಮತ್ತೆ ಮತ್ತೆ ನಡೆಯುತ್ತಿರುವುದನ್ನು ನೋಡಿದರೆ ಬಿಜೆಪಿ ಶಿವಮೊಗ್ಗದಲ್ಲಿ ಕೋಮು ರಾಜಕೀಯದ ಪ್ರಯೋಗಶಾಲೆಯ ಶಾಖೆಯನ್ನು ತೆರೆದಿರುವಂತೆ ಕಾಣುತ್ತಿದೆ ಎಂದಿದೆ.

Leave a Reply