ಮೈಸೂರು: ಕರ್ನಾಟಕದಲ್ಲಿ ಸೋಲಿನ ಭಯದಿಂದ BJP Karnataka – ಜೆಡಿಎಸ್ ಒಂದಾಗಿದೆ. ಈ ಅಪವಿತ್ರ ಮೈತ್ರಿಯನ್ನು ನಾಡಿನ ಜನತೆ ತಿರಸ್ಕರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆನೀಡಿದರು.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಜೆಡಿಎಸ್ ಹಾಗೂ Bharatiya Janata Party (BJP) ಪಕ್ಷಗಳನ್ನು ತ್ಯಜಿಸಿರುವ ಹಲವು ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಯಾವುದೇ ಷರತ್ತು ವಿಧಿಸದೇ ಕಾಂಗ್ರೆಸ್ ಸೇರಿದವರನ್ನು ಕಾಂಗ್ರೆಸ್ ಸದಾ ಸ್ವಾಗತಿಸುತ್ತದೆ. ಸ್ಥಾನಮಾನಕ್ಕಾಗಿ ಅಲ್ಲದೇ ಬಿಜೆಪಿಯಲ್ಲಿ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ ಹಾಗೂ ಕಾಂಗ್ರೆಸ್ ಪಕ್ಷ ಬಡವರ ಪರವಾಗಿದೆ ಎಂಬ ಕಾರಣಕ್ಕಾಗಿ ಹಲವರು ಇಂದು ಕಾಂಗ್ರೆಸ್ ಸೇರಿದ್ದಾರೆ. ಅವರೆಲ್ಲರನ್ನೂ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡಿದ್ದೇನೆ ಎಂದರು.
ರಾಜಕೀಯ, ಸಾಮಾಜಿಕ ಕೇತ್ರದಲ್ಲಿ ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ರಾಜೀವ್ ಅವರು ಕಾಂಗ್ರೆಸ್ಸಿನ ಕಾರ್ಯಕ್ರಮಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಒಳ್ಳೆಯ ಬೆಳವಣಿಗೆ ಹಾಗೂ ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ಸೇರ್ಪಡೆ ಮಾಡಿಕೊಳ್ಳುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ರಾಜೀವ್ ಮತ್ತು ಇತರೆ ಎಲ್ಲಾ ಮುಖಂಡರ ಸೇರ್ಪಡೆಯಿಂದಾಗಿ ಶಕ್ತಿ ಬಂದಂತಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜೀವ್ ಅವರು ಸೇರಿರುವುದರಿಂದ ಕೃಷ್ಣರಾಜ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಲಕ್ಷ್ಮಣ್ ಹೆಚ್ಚು ಮತ ಪಡೆಯುವ ವಿಶ್ವಾಸವಿದೆ ಎಂದರು.
ಇಂದು ಸೇರ್ಪಡೆಯಾದವರು ಸೇರಿದಂತೆ ಕಾಂಗ್ರೆಸ್ ನ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಭಿನ್ನಾಭಿಪ್ರಾಯಗಳನ್ನು ಮರೆತು ಕಾಂಗ್ರೆಸ್ ಪಕ್ಷ ಗೆಲ್ಲಿಸಬೇಕೆಂಬ ಗುರಿಯೊಂದಿಗೆ ಕೆಲಸ ಮಾಡಬೇಕು. ಈ ಕ್ಷೇತ್ರದಲ್ಲಿ ಬಡವರಿದ್ದಾರೆ. ಯಾವುದೇ ಜಾತಿ, ಧರ್ಮ ಅಥವಾ ಪಕ್ಷದ ಆಧಾರದ ಮೇಲೆ ಕಾಂಗ್ರೆಸ್ ಬಡವರನ್ನು ಕಡೆಗಣಿಸಿಲ್ಲ ಎಂದರು.
ಬಿಜೆಪಿಯವರು “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಎಂದು ಹೇಳುತ್ತಾರೆ. ಬುರ್ಖಾ, ಗಡ್ಡ, ಶಿಲುಬೆ ಹಾಕಿದವರು ಬರಬಾರದು ಎನ್ನುತ್ತಾರೆ. ಇದು ಯಾವ ರೀತಿಯ ಸಬ್ ಕಾ ಸಾಥ್? ಸುಳ್ಳು ಬಿಜೆಪಿಯ ಮನೆದೇವರು. 15 ಲಕ್ಷ ಪ್ರತಿ ಕುಟುಂಬದ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. ಅಚ್ಚೇ ದಿನ್ ಬರುತ್ತದೆ ಎಂದರು. ಬಂತೇ? ಗ್ಯಾಸ್, ಗೊಬ್ಬರದ ಬೆಲೆ ಏರಿಸಿದರು. ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿದಿದೆ ಎಂದರು.
Narendra Modi ಅವರು ಪ್ರಧಾನಿಯಾಗಿ ಜನಸಾಮಾನ್ಯರ ಬದುಕಿಗೆ ಅನುಕೂಲವಾಗುವಂತೆ ಏನೂ ಮಾಡಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ, ಭಾರತದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಗೆ ಕೊಂಡೊಯ್ಯುತ್ತೇನೆ ಎಂದರು. ಆಗಿದೆಯೇ? ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದವರಿಗೆ ಇಂದಿನವರೆಗೆ ಮಾಡಲಾಗಿಲ್ಲ. ನರೇಂದ್ರ ಮೋದಿಯವರು ನುಡಿದಂತೆ ನಡೆದಿಲ್ಲ. ಇಷ್ಟೆಲ್ಲಾ ಅನ್ಯಾಯ ಮಾಡಿದ ಬಿಜೆಪಿಗೆ ಯಾಕೆ ಮತ ಹಾಕಬೇಕು? ಎಂದು ಪ್ರಶ್ನಿಸಿದರು.
ನಮ್ಮ ಕಾರ್ಯಕರ್ತರಿಗೆ ನಾವು ಮಾಡಿರುವ ಕೆಲಸವನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಮತ್ತು ಜನರಿಗೆ ಸುಳ್ಳು ಹೇಳಬೇಡಿ ಎಂದು ಹೇಳಿದ್ದೇನೆ. ಹಿಂದಿನ ಬಾರಿ ನಮ್ಮ ಸರ್ಕಾರ 168 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿತ್ತು. ಹಾಗಾಗಿ ನುಡಿದಂತೆ ನಡೆದಿದ್ದೇವೆ ಎಂದು ಹೆಮ್ಮೆಯಿಂದ ಹೇಳುತ್ತೇವೆ ಎಂದರು.
ನಾವು ಹಣ ಕೇಳುತ್ತಿರುವುದು ಗ್ಯಾರಂಟಿಗಳಿಗೆ ಎಂದು Nirmala Sitharaman ಅವರು ಹೇಳುತ್ತಾರೆ. ಈ ಬಗ್ಗೆ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡಲು ಬಿಜೆಪಿಯವರಿಗೆ ನಾವು ಆಹ್ವಾನ ನೀಡಿದ್ದೇವೆ. ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೊಡಬೇಡಿ. ಮುಂದಿನ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಲಾಗಿದೆ ಎಂದರು.
2023-24 ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಕೊಡುತ್ತೇವೆ ಎಂದಿದ್ದರು. ಈ ವರ್ಷ ಒಂದೇ ಒಂದು ಪೈಸೆ ಬಂದಿಲ್ಲ. ಬಜೆಟ್ ನಲ್ಲಿ ಘೋಷಿಸಿದಂತೆ ಹಣ ಕೊಟ್ಟಿದ್ದೇವೆ ಎಂದು ದೇವರ ಮೇಲೆ ಪ್ರಮಾಣ ಮಾಡಿ ಹೇಳಲಿ ಎಂದು ಸವಾಲೆಸೆದರು.
18,171 ಕೋಟಿ ರೂ.ಗಳ ಬರಪರಿಹಾರವನ್ನು ಕೊಡಲು ಮನವಿ ಮಾಡಿ 5 ತಿಂಗಳಾಗಿದ್ದರೂ ಒಂದು ರೂಪಾಯಿ ನೀಡಿಲ್ಲ. ರೈತರು ಕಷ್ಟದಲ್ಲಿದ್ದರೂ ಈವರೆಗೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಇದು ಸತ್ಯ. ಕರ್ನಾಟಕದ ಜನರನ್ನು ಅತ್ಯಂತ ಅಲಕ್ಷ್ಯದಿಂದ ಕಾಣುತ್ತಿದ್ದು, ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದರು.
15ನೇ ಹಣಕಾಸಿನ ಆಯೋಗವು ನಮಗೆ ₹5,495 ಕೋಟಿ ವಿಶೇಷ ಅನುದಾನ ಶಿಫಾರಸು ಮಾಡಿತ್ತು, ಇದೂ ಸೇರಿ ಕೆರೆಗಳ ಅಭಿವೃದ್ಧಿ ಹಾಗೂ ಪೆರಿಫೆರಲ್ ರಿಂಗ್ ರಸ್ತೆಗೆ ಬರಬೇಕಿದ್ದ ಒಟ್ಟು 11,495 ಕೋಟಿ ರೂ.ಗಳ ಪೈಕಿ ಒಂದು ರೂಪಾಯಿ ನೀಡದೆ ಸುಳ್ಳು ಹೇಳುತ್ತಿದ್ದಾರೆ ಎಂದರು.
ಅವರ ತಾಳಕ್ಕೆ ಕುಣಿಯುವ ಬಿಜೆಪಿ ಅವರದ್ದು 7 ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹವಾಗಿದೆ. ಅದಕ್ಕಾಗಿಯೇ ನಾವು ಸರ್ವೊಚ್ಛ ನ್ಯಾಯಾಲಯಕ್ಕೆ ಹೋಗಿದ್ದೇವೆ. ಬರ ಸಮೀಕ್ಷೆ ವರದಿ ನೀಡಿ ಒಂದು ತಿಂಗಳೊಳಗೆ ಪರಿಹಾರ ಕೊಡಬೇಕೆಂದು ಕಾನೂನಿನಲ್ಲಿದೆ, ಆದರೂ ನಮಗೆ ಪರಿಹಾರ ನೀಡಿಲ್ಲ ಎಂದರು.
ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವ ಬಿಜೆಪಿಗೆ ಮತ ಹಾಕಬೇಕೆ ಎಂದು ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ. ತುಟಿ ಬಿಚ್ಚದ ಬಿಜೆಪಿ ಸಂಸದರದ್ದು ಬರೀ ಪ್ರಲಾಪ. ಮಕ್ಕಳ ಆಸ್ಪತ್ರೆ, ಮೈಸೂರು ಜಿಲ್ಲಾ ಆಸ್ಪತ್ರೆ, ಮೈಸೂರು- ಬೆಂಗಳೂರು ಕಾರಿಡಾರ್, ಕಾಲೇಜು, ಹಾಸ್ಟೆಲ್, ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಿಸಿದ್ದು ನಾವು. ಬಿಜೆಪಿಯವರು ಏನೂ ಮಾಡಿಲ್ಲ ಎಂದರು.
ಜಿಡಿಎಸ್ ಅಂದರೆ ಜಾತ್ಯಾತೀತ ಜನತಾದಳ. ಜನತಾದಳ ಇಂದು ಜಾತ್ಯಾತೀತವಾಗಿ ಉಳಿದಿದೆಯೇ? ನರೇಂದ್ರ ಮೋದಿ ಪ್ರಧಾನಿಯಾದರೆ ದೇಶವನ್ನೇ ಬಿಟ್ಟು ಹೋಗುತ್ತೇನೆ, ನಾನು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರ ಅನುಕೂಲಸಿಂಧು ರಾಜಕಾರಣ ಎಲ್ಲಿಯವರೆಗೆ ನಡೆಯುತ್ತದೆ? ಮೇಕೆದಾಟು ಯೋಜನೆಯನ್ನು ಎನ್ಡಿಎ ಮೂಲಕ ಮಾಡಿಸುವುದಾಗಿ ಹೇಳುತ್ತಾರೆ. ಬಿಜೆಪಿ ಕಡೆಯಿಂದ ಯಾಕೆ ಮಾಡಿಸಲಿಲ್ಲ? ಎಂದು ಪ್ರಶ್ನಿಸಿದರು.
ಮೈಸೂರು, ಚಾಮರಾಜನಗರ ಕ್ಷೇತ್ರಕ್ಕೆ ಬಿಜೆಪಿಯವರ ಕೊಡುಗೆಗಳೇನು? ಬಿಜೆಪಿ ಎಂದರೆ ಲೂಟಿಕೋರರು. ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿರುವವರನ್ನು ಜನರು ಬೆಂಬಲಿಸಬೇಕು. ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಜ್ಞಾನವಿರುವ ಈ ಎಲ್ಲರೂ ಜನರ ಧ್ವನಿಯಾಗಿ ದೇಶದ ಸಂಸತ್ತಿನಲ್ಲಿ ಕೆಲಸ ಮಾಡುವಂತಾಗಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಲೋಕಸಭೆಯಲ್ಲಿ ಜನರ ಪ್ರತಿನಿಧಿಯಾಗಬೇಕು. ಆದ್ದರಿಂದ ಲಕ್ಷ್ಮಣ್ ಅವರನ್ನು ಜನರು ಗೆಲ್ಲಿಸಬೇಕು. ಲಕ್ಷ್ಮಣ್ ಅವರ ಗೆಲುವು ನಮ್ಮ ಸರ್ಕಾರದ ಹಾಗೂ ಗ್ಯಾರಂಟಿಗಳ ಗೆಲುವಾಗಲಿದೆ ಎಂದರು.




