ಬೆಂಗಳೂರು: ನಮಗೆ ಪ್ರಶ್ನೆ ಕೇಳುವ ಮೊದಲು ನಿಮ್ಮದೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿರಂತರವಾಗಿ ಪಕ್ಷದ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ಧೈರ್ಯ ತೋರಿಸಿ ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಸವಾಲು ಹಾಕಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಎಚ್.ಡಿ.ರೇವಣ್ಣ ಮತ್ತು ಅವರ ಕುಟುಂಬದ ವಿರುದ್ಧದ ತನಿಖೆಗೆ ತೋರಿದ ಆತುರ ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣದಲ್ಲಿ ಏಕಿಲ್ಲ ಎಂದು ಪ್ರಶ್ನಿಸಿದ್ದ ಆರ್.ಅಶೋಕ್ ಅವರಿಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಭ್ರಷ್ಟಾಚಾರ, ವಿದ್ರೋಹ ಮತ್ತು ಸ್ವಜನಪಕ್ಷಪಾತವೂ ಸೇರಿದಂತೆ ಯತ್ನಾಳ್ ಅವರು ಮಾಡುತ್ತಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ. ಇಂತಹ ಆರೋಪಗಳನ್ನು ಮಾಡಿದ ನಂತರವೂ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ಕ್ರಮಕೈಗೊಳ್ಳದಿರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶ ಇರುವುದನ್ನು ಪಕ್ಷದ ಹೈಕಮಾಂಡ್ ಕೂಡಾ ಒಪ್ಪಿಕೊಂಡಂತೆ ಕಾಣುತ್ತಿದೆ ಎಂದಿದ್ದಾರೆ.
ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ, ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ ಎಸ್.ಐ.ಟಿ ಯನ್ನು ರಚಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಿಮಗೆ ಇಲ್ಲವೇ ನಿಮ್ಮ ಪಕ್ಷಕ್ಕೆ ಏನಾದರೂ ಹೇಳುವುದಿದ್ದರೆ ಇಲ್ಲವೇ ಕೇಳುವುದಿದ್ದರೆ ಎಸ್.ಐ.ಟಿ ಮುಂದೆ ಹೋಗಿ ಕೇಳಿ, ಇಲ್ಲವೇ ಹೇಳಿ ಎಂದಿದ್ದಾರೆ.
ಇದನ್ನು ಬಿಟ್ಟು ಹಾದಿಬೀದಿಯಲ್ಲಿ ಮಾತನಾಡುವವರಂತೆ, ತಾವೇ ಕತೆ ಕಟ್ಟಿಕೊಂಡು ತಲೆಬುಡ ಇಲ್ಲದ ಅರ್ಥಹೀನ ಪ್ರಶ್ನೆಗಳನ್ನು ನನಗೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ ಎಂದು ಕಿವಿಹಿಂಡಿದ್ದಾರೆ.




