ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ಬೆಂಕಿ ಇಡುವ ಕೆಲಸ ಮಾಡುವುದರ ಜತೆಗೆ ದಕ್ಷಿಣ ಭಾರತ – ಉತ್ತರ ಭಾರತವೆಂದು ಇಬ್ಭಾಗವನ್ನು ಮಾಡಿತ್ತು! ಎಂದು ಬಿಜೆಪಿ ಆರೋಪಿಸಿದೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ವಿ.ಡಿ.ಸಾವರ್ಕರ್ ಅವರ ನಾಮಫಲಕಕ್ಕೆ ಮಸಿ ಬಳಿದ ಪ್ರಕರಣದ ಫೋಟೋಗಳನ್ನು ಸಾಮಾಜಿಕ ಜಾಲಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ, ಆದರೆ, ಈಗ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಭಗತ್ ಸಿಂಗ್ ಅವರನ್ನು ಇಟ್ಟುಕೊಂಡು ಕಾಂಗ್ರೆಸ್ಸಿನ ಪುಡಿ ರೌಡಿಗಳು ಅಖಂಡ ಭಾರತೀಯರಾದ ಕನ್ನಡಿಗರನ್ನು ಒಡೆದು ಆಳುವ ನೀತಿಯ ಭಾಗವಾಗಿ ಟೂಲ್ ಕಿಟ್ ಅಜೆಂಡಾವನ್ನು ಪ್ರದರ್ಶನ ಮಾಡುತ್ತಿದ್ದಾರೆ ಎಂದಿದೆ.
ಯಲಹಂಕದ ವೀರ ಸಾರ್ವಕರ್ ಸೇತುವೆಯ ನಾಮಫಲಕವನ್ನು ಛಿದ್ರ ಮಾಡಿ ಹೊಸ ವಿವಾದವನ್ನು ಸೃಷ್ಟಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಭಾರತೀಯ ಆಸ್ಮಿತೆಯ ಭಾಗವಾಗಿರುವ ಕನ್ನಡಿಗರಾದ ನಾವು ಒಟ್ಟಾಗಿ ಬಿಸಿ ಮುಟ್ಟಿಸುವ ಸಮಯ ಬಂದಿದೆ ಎಂದಿದೆ.
ಬನ್ನಿ, ದೇಶ ದ್ರೋಹಿ, ನಾಡ ದ್ರೋಹಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಒಟ್ಟಾಗಿ ಹೋರಾಡೋಣ! ಎಂದು#AntiNationalCongress ಹ್ಯಾಷ್ ಟ್ಯಾಗ್ ನೊಡನೆ ಪೋಸ್ಟ್ ಮಾಡಿದೆ.
ಇನ್ನು ಘಟನೆ ಕುರಿತ ವಿಡಿಯೊ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಯಲಹಂಕ ಬಳಿಯ ಸ್ವಾತಂತ್ರ್ಯ ವೀರ ವಿಡಿ ಸಾವರ್ಕರ್ ಮೇಲ್ಸೇತುವೆಗೆ ಮಸಿ ಬಳಿಯುವ ಮೂಲಕ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐ ಕಾರ್ಯಕರ್ತರು ವಿಕೃತಿ ಮೆರೆದಿದ್ದಾರೆ ಎಂದಿದ್ದಾರೆ.
ದೇಶದ್ರೋಹಿಗಳಿಗೆ ಸದಾ ಕುಮ್ಮಕ್ಕು ನೀಡುವ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳಲ್ಲಿಯೂ ದೇಶದ್ರೋಹದ ಮನಸ್ಥಿತಿಯನ್ನು ಬೆಳೆಸುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಪಣವಾಗಿಟ್ಟ ಮಹಾನ್ ಸ್ವಾತಂತ್ರ್ಯ ಹೋರಾಟಗಾರನಿಗೆ ಈ ರೀತಿ ಅಪಮಾನ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ತುಷ್ಟೀಕರಣ ರಾಜಕಾರಣಕ್ಕೆ ಜೋತು ಬಿದ್ದಿರುವ ಕಾಂಗ್ರೆಸ್ ಸರ್ಕಾರ ಇಂತಹ ಕುಕೃತ್ಯಗಳಿಗೆ ಪ್ರಚೋದನೆ ನೀಡುತ್ತಿರುವುದು ಖಂಡನೀಯ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವೀರ ಸಾವರ್ಕರ್ ಅವರು ಅನುಭವಿಸಿದ ನರಕ ಯಾತನೆ ಹಾಗೂ ಅಸ್ಪ್ರಶ್ಯತೆಯ ನಿವಾರಣೆಗಾಗಿ ಶ್ರಮಿಸುವ ಜತೆ ಹಿಂದೂಗಳ ಒಗ್ಗೂಡುವಿಕೆಗಾಗಿ ಪಟ್ಟ ಶ್ರಮವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಸ್ವತಃ ಇಂದಿರಾ ಗಾಂಧಿ ಅವರೇ ವೀರ ಸಾವರ್ಕರ್ ಅವರ ಕುರಿತು ಪ್ರಶಂಸೆಯ ಮಾತನ್ನಾಡಿದ್ದನ್ನು ಕಾಂಗ್ರೆಸ್ಸಿಗರು ಮರೆತಿರಬಹುದು ಎಂದಿದ್ದಾರೆ.
ವೀರ ಸಾವರ್ಕರ್ ಅವರನ್ನು ಕಾಂಗ್ರೆಸ್ಸಿಗರು ದ್ವೇಷಿಸಬಹುದು. ಆದರೆ, ಅವರನ್ನು ಪ್ರೀತಿಸುವ ಕೋಟ್ಯಂತರ ಜನರು, ಅವರನ್ನು ಪ್ರೇರಣೆಯಾಗಿಸಿಕೊಂಡಿರುವ ಅಸಂಖ್ಯ ಯುವಕರು ಭಾರತದಲ್ಲಿದ್ದಾರೆ. ಇಂತಹ ದೇಶದ್ರೋಹದ ಕೆಲಸಕ್ಕೆ ಕೈ ಹಾಕುವುದನ್ನು ಕಾಂಗ್ರೆಸ್ ಪಕ್ಷ ಕೂಡಲೇ ನಿಲ್ಲಿಸಬೇಕು ಎಂದಿದ್ದು, #AntiNationalCongress ಹ್ಯಾಷ್ ಟ್ಯಾಗ್ ಬಳಸಿ ಪೋಸ್ಟ್ ಮಾಡಿದ್ದಾರೆ.



