ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನವೆಂಬರ್ ೧೬ ರ ಗುರುವಾರ ಸಂಜೆ ೫.೩೦ ಕ್ಕೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಹಾಗೂ ವಿಶ್ರಾಂತ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಶಿವಲಿಂಗೇಗೌಡ ಅವರು ಅನುವಾದಿಸಿದ ಮೂಲ ʻಖಲ್ಹೀಲ್ ಗಿಬ್ರಾನ್ʼ ಅವರ ಕೃತಿ ʻಮುರಿದ ರೆಕ್ಕೆಗಳುʼ ಪುಸ್ತಕ ಬಿಡುಗೆಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್.ಕೆ. ಪಾಟೀಲ ಅವರು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಹಾಗೂ ʻಮುರಿದ ರೆಕ್ಕೆಗಳು’ ಪುಸ್ತಕ ಬಿಡುಗಡೆಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
೨೦೨೩ನೆಯ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಆಂಧ್ರಪ್ರದೇಶ, ವಿಜಯನಗರಂನ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ತೇಜಸ್ವಿ ವೆಂಕಪ್ಪ ಕಟ್ಟೀಮನಿ ಅವರಿಗೆ ಪ್ರದಾನ ಮಾಡಲಾಗುವುದು.
ವಿಶ್ರಾಂತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಶಿವಲಿಂಗೇಗೌಡ ಅವರು ಅನುವಾದಿಸಿದ ಖಲ್ಹೀಲ್ ಗಿಬ್ರಾನ್ ಅವರ ʻಬ್ರೋಕನ್ ವಿಂಗ್ಸ್’ ಎನ್ನುವ ಕೃತಿಯ ಕನ್ನಡ ಅನುವಾದ ಕೃತಿ ʻಮುರಿದ ರೆಕ್ಕೆಗಳುʼ ಪುಸ್ತಕದ ಕುರಿತು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಡಾ. ಅಜಯ್ ಕುಮಾರ್ ಸಿಂಗ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ.




