ಬೆಂಗಳೂರು: ಯಾದಗಿರಿ ಸಬ್ ಇನ್ಸ್ ಪೆಕ್ಟರ್ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೃಹ ಸಚಿವಾಲಯಕ್ಕೆ ಪತ್ರ ಬರೆದ ಬೆನ್ನೆಲ್ಲೇ ಕೇಂದ್ರ ಸರ್ಕಾರ ಈ ಸಂಬಂಧ ವರದಿ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಕುರಿತು ನಿಷ್ಪಕ್ಷಪಾತ ತನಿಖೆ ಆಗುತ್ತಿಲ್ಲ ಎಂದು ಸಚಿವೆ ಶೋಭಾ ಇತ್ತೀಚೆಗೆ ಆರೋಪಿಸಿದ್ದರು. ಜೊತೆಗೆ ಪತ್ರ ಕೂಡ ಬರೆದಿದ್ದರು, ಶೋಭಾ ಕರಂದ್ಲಾಜೆ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಗೃಹ ಸಚಿವಾಲಯ ಪ್ರಕರಣದ ಮಾಹಿತಿ ನೀಡುವಂತೆ ಸೂಚನೆ ನೀಡಿದೆ.
ಈ ನಡುವೆ ಪಿಎಸ್ಐ ಪರಶುರಾಮ ಸಾವಿನ ತನಿಖೆಯ ಹೊಣೆಯನ್ನ ಹೊತ್ತಿರುವ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿದ್ದಾರೆ. ತನಿಖೆ ಜವಾಬ್ದಾರಿ ತೆಗೆದುಕೊಂಡ ಆರು ದಿನಗಳಲ್ಲಿ ಸಿಐಡಿ ಎಸ್.ಪಿ. ಎಂಟ್ರಿ ಕೊಟ್ಟಿದ್ದರು. ಪರಶುರಾಮ ಕುಟುಂಬಸ್ಥರನ್ನು ಕರೆಸಿಕೊಂಡಿರುವ ಅಧಿಕಾರಿಗಳು ಪರಶುರಾಮ ಮೊಬೈಲ್ ಪಡೆದುಕೊಂಡಿದ್ದಾರೆ. ಜೊತೆಗೆ ಕುಟುಂಬಸ್ಥರ ಸಮ್ಮುಖದಲ್ಲಿ ಸ್ಥಳ ಮಹಜರು ಕೂಡ ನಡೆಸಿದ್ದರು.
ಯಾದಗಿರಿ ನಗರ ಠಾಣೆಯಿಂದ ಸೈಬರ್ ಠಾಣೆಗೆ ವರ್ಗಾವಣೆ ಆಗಿದ್ದ ಪಿಎಸ್ಐ ಪರಶುರಾಮ ಸಾವಾಗಿ ಹಲವು ದಿನಗಳು ಕಳೆದಿವೆ. ಸಾವಾಗಿ ಮಾರನೇ ದಿನವೇ ಕೇಸ್ ಅನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಕೇಸ್ ಅನ್ನುನ್ನ ತನಿಖೆಯ ಜವಾಬ್ದಾರಿ ವಹಿಸಿಕೊಂಡ ಮಾರನೇ ಸಿಐಡಿ ಅಧಿಕಾರಿಗಳು ಯಾದಗಿರಿಗೆ ಎಂಟ್ರಿ ಕೊಟ್ಟಿದ್ದರು. ಆರಂಭದಲ್ಲಿ ಸಿಐಡಿ ಡಿವೈಎಸ್ಪಿ ಪುನೀತ್ ನೇತೃತ್ವದ ತಂಡ ಆಗಮಿಸಿದ ಯಾದಗಿರಿ ಡಿವೈಎಸ್ಪಿ ಕಚೇರಿಯಲ್ಲಿ ಸಾಕಷ್ಟು ಮಾಹಿತಿ ಕಲೆಹಾಕಿದ್ದರು.
ಮೃತ ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ ಅವರಿಗೆ ಹೆರಿಗೆ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹಾಗಾಗಿ ಇಡೀ ಕುಟುಂಬ ಸದ್ಯ ಖುಷಿಯಲ್ಲಿದೆ. ಗಂಡು ಮಗುವಿನ ಆಗಮನದೊಂದಿಗೆ ಮತ್ತೆ ಪರಶುರಾಮನೇ ಹುಟ್ಟಿ ಬಂದಿದ್ದಾನೆ ಎಂದು ಕುಟುಂಬ ಸಂಭ್ರಮದಲ್ಲಿದೆ.



