ಬೆಂಗಳೂರು: ದಿನಾಂಕ 06.04.2024ರಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವಿದ್ಯಾರ್ಥಿನಿಯರ ಹಾಸ್ಟೆಲ್ನ 47 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾದ ಸುದ್ದಿಯನ್ನು ತಿಳಿದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಮಾನ್ಯ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜೊತೆಗೆ ಬೆಂಗಳೂರು ಮೆಡಿಕಲ್ ಕಾಲೇಜಿನ ಹಾಸ್ಟೆಲ್ಗೂ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಯ ಬಗ್ಗೆ, ಕುಡಿಯುವ ನೀರು, ಶೌಚಾಲಯ, ಕೋಣೆಗಳು ಸ್ವಚ್ಛತೆಯಿಂದ ಕೂಡಿರದೇ ಇರುವುದನ್ನು ಕಂಡು ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಕ್ರಮವಹಿಸುವಂತೆ ಸೂಚಿಸಿದರು.
ಅಲ್ಲದೇ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಕೂಡಲೇ ಕರೆ ಮಾಡಿ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಸೂಚಿಸಿದರು.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್ಐ) ಮಹಿಳಾ ಹಾಸ್ಟೆಲ್ನ 47 ವಿದ್ಯಾರ್ಥಿನಿಯರು, ಅತಿಸಾರ ಹಾಗೂ ನಿರ್ಜಲೀಕರಣದಿಂದ ಶುಕ್ರವಾರ ಅಸ್ವಸ್ಥಗೊಂಡು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಕುರಿತು ಪತ್ರಿಕೆಗಳಲ್ಲಿ, ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿತ್ತು.
47 ವಿದ್ಯಾರ್ಥಿನಿಯರ ಪೈಕಿ 28 ವಿದ್ಯಾರ್ಥಿನಿಯರು, ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 15 ಮಂದಿ ಹೆಚ್ ಬ್ಲಾಕ್ನಲ್ಲಿ ಹಾಗೂ 4 ವಿದ್ಯಾರ್ಥಿನಿಯರು ತುರ್ತು ನಿಗಾ ಘಟಕದಲ್ಲಿ, ಚಿಕಿತ್ಸೆ ಪಡೆಯುತ್ತಿದ್ದರು.
ಈ ಸಂಬಂಧ ಸಮೂಹ ಮಾಧ್ಯಮ ಹಾಗೂ ದಿನಪತ್ರಿಕೆಗಳ ವರದಿಯನ್ನಾಧರಿಸಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾದ ಡಾ.ನಾಗಲಕ್ಷ್ಮಿ ಚೌದರಿಯವರು ತಕ್ಷಣ ಕಾರ್ಯಪ್ರವೃತ್ತರಾದರು. ಬೆಂಗಳೂರು ಮೆಡಿಕಲ್ ಕಾಲೇಜಿನ ಮಹಿಳಾ ಹಾಸ್ಟೆಲ್ಗೆ ದಿನಾಂಕ 06.04.2024 ರಂದು ಖುದ್ದು ಭೇಟಿ ನೀಡಿ, ಹಾಸ್ಟೆಲ್ನಲ್ಲಿರುವ ಶೌಚಾಲಯ, ನೀರು, ಆಹಾರ, ಲೈಟ್, ಫ್ಯಾನ್ ಹಾಗೂ ಇನ್ನೂ ಹೆಚ್ಚಿನ ಸಮಸ್ಯೆಗಳನ್ನು ಪರಿಶೀಲಿಸಿದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ವಿದ್ಯಾರ್ಥಿನಿಯರಿಗೆ ಸರಿಯಾದ ಸೌಲಭ್ಯಗಳು ಇರದಿದ್ದು, ಮಕ್ಕಳು ಓದುವ ಕೊಠಡಿಯಲ್ಲಿ ಕನಿಷ್ಠ ಇಬ್ಬರು ಇರಬೇಕಾದಲ್ಲಿ ಮೂರರಿಂದ ನಾಲ್ಕು ವಿದ್ಯಾರ್ಥಿನಿಯರನ್ನು ಇರಿಸಿರುವುದು, ನೆಮ್ಮದಿಯಾಗಿ ಓದಲು ಅವಕಾಶ ಇರದೆ ಕಲುಷಿತ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿನಿಯರು ಎಲ್ಲಾ ಸೌಲಭ್ಯಗಳಿಂದ ವಂಚಿತರಾಗಿರುವುದು ಕಂಡು ಬಂದಿರುತ್ತದೆ ಎಂದು ಹೇಳಿದ್ದಾರೆ.
ಅಲ್ಲದೆ, ವಿದ್ಯಾರ್ಥಿನಿಯರು ದಾಖಲಾಗಿರುವ ವಿಕ್ಟೋರಿಯಾ ಆಸ್ಪತ್ರೆಗೂ ಭೇಟಿ ನೀಡಿ, ವಿದ್ಯಾರ್ಥಿನಿಯರ ಯೋಗ ಕ್ಷೇಮವನ್ನು ವಿಚಾರಿಸಿ, ಅವರಿಗೆ ಸಾಂತ್ವನ ಹೇಳಲಾಗಿದ್ದು, ವೈದ್ಯಕೀಯ ಶಿಕ್ಷಣಕ್ಕೆ ಹೆಸರಾಗಿರುವ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಮಹಿಳಾ ಹಾಸ್ಟೆಲ್ನಲ್ಲಿ ನಡೆದಿರುವ ಈ ಅವ್ಯವಸ್ಥೆಯನ್ನು ರಾಜ್ಯ ಮಹಿಳಾ ಆಯೋಗ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.
ಆದ್ದರಿಂದ ಸದರಿ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಕಳೆದ 3 ವರ್ಷಗಳಿಂದ ಮಹಿಳಾ ಹಾಸ್ಟೆಲ್ನಲ್ಲಿ ನೀಡಿರುವ ಸೌಲಭ್ಯದ ಬಗ್ಗೆ ವಿವರವಾದ ವರದಿಯನ್ನು ನೀಡುವಂತೆ ಹಾಗೂ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿಯರ ಸಂಪೂರ್ಣ ಮಾಹಿತಿಯನ್ನು ನೀಡಿ, ಮುಂದೆಂದೂ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟವರಿಗೆ ಕಟ್ಟು ನಿಟ್ಟಾದ ನಿರ್ದೇಶನ ನೀಡಿ, ಈ ಅವ್ಯವಸ್ಥೆಗೆ ಕಾರಣಕರ್ತರಾಗಿರುವ ಅಧಿಕಾರಿ/ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ ಅತೀ ಶೀಘ್ರದಲ್ಲಿ ಕಳುಹಿಸಿ ಕೊಡುವಂತೆ ಅವರು ಕೋರಿದ್ದಾರೆ.




