ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ಭರತ್ ಭೂಷಣ್ ಅವರ ಪಾರ್ಥಿವ ಶರೀರ ಗುರುವಾರ ಬೆಳಿಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿತು. ಅಲ್ಲಿಂದ ಆಂಬುಲೆನ್ಸ್‌ನಲ್ಲಿ ರಸ್ತೆ ಮಾರ್ಗವಾಗಿ ಮತ್ತಿಕೆರೆ ಬಡಾವಣೆಯಲ್ಲಿರುವ ಅವರ ಮನೆಗೆ ಕರೆತರಲಾಯಿತು. ಅಲ್ಲಿಗೆ ಸಿಎಂ ಸಿದ್ದರಾಮಯ್ಯ ಅವರು ತೆರಳಿ ಭರತ್ ಅವರ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು. ಅವರ ಕುಟುಂಬದವರೊಂದಿಗೆ ಕೆಲಕಾಲ ಮಾತನಾಡಿ, ಸಾಂತ್ವನ ಹೇಳಿದರು. ಪೊಲೀಸ್ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮೃತರ ಅಂತಿಮ ದರ್ಶನ ಪಡೆದರು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಈ ವೇಳೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದರು.
ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹ್ಯೇಯಕೃತ್ಯ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ಬಾಲಾಕೋಟ್ ಘಟನೆ ನಡೆದಿದ್ದು, ಪುನ: ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದರು.
ಕನ್ನಡಿಗರಾದ ಭರತ್ ಭೂಷಣ್, ಮಂಜುನಾಥ್ ರಾವ್ ಹಾಗೂ ಬೆಂಗಳೂರಿನಲ್ಲಿ ನೆಲಿಸಿದ್ದ ಮಧುಸೂದನ್ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾ ರೆಡ್ಡಿಯವರನ್ನು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧುಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದರು.
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದರು.




