ಬೆಂಗಳೂರು: ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ರಾಜ್ಯ ಕಾಂಗ್ರೆಸ್ ಇದೀಗ ಸರ್ಕಾರದ ಸಾಧನೆಗಳು ಮತ್ತು ನಿಲುವುಗಳನ್ನು ಜನರ ಮುಂದೆ ಇಡಲು ಐವರು ಸಚಿವರನ್ನು ಸರ್ಕಾರದ ವಕ್ತಾರರನ್ನಾಗಿ ನೇಮಿಸಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಕೆಲವು ಮಂತ್ರಿಗಳು ಮತ್ತು ಶಾಸಕರುಗಳಿಂದ ಸರ್ಕಾರಕ್ಕೆ ಸಂಬಂಧಿಸಿದ ಗಂಭೀರ ವಿಚಾರಗಳ ಕುರಿತು ಗೊಂದಲಕಾರಿ ಹೇಳಿಕೆಗಳು ಹೊರಬರುವುದನ್ನು ನಿಯಂತ್ರಿಸುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಐವರು ಸಚಿವರನ್ನು ಸರ್ಕಾರದ ವಕ್ತಾರರನ್ನಾಗಿ ನೇಮಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ.ಖಂಡ್ರೆ, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರನ್ನು ವಕ್ತಾರರನ್ನಾಗಿ ನೇಮಿಸಲಾಗಿದೆ.




