ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಹೊಸ ದಾಖಲೆ ನಿರ್ಮಿಸಿದ್ದಾರೆ. ಇಲ್ಲಿಯವರೆಗೆ ದೇವರಾಜ ಅರಸು ಸುದೀರ್ಘ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ದಾಖಲೆ ಹೊಂದಿದ್ದಾರೆ. ಈ ದಾಖಲೆಯನ್ನು ನಾಳೆಗೆ ಸರಿಗಟ್ಟಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆಯಿಂದ ಅತಿ ಹೆಚ್ಚಿನ ಅವಧಿಗೆ ರಾಜ್ಯದ ಮುಖ್ಯಮಂತ್ರಿ ಎನ್ನುವ ಹೊಸ ದಾಖಲೆ ನಿರ್ಮಿಸಲಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.
ಅರಸು ಅವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಚುನಾವಣೆಯನ್ನು ಎದುರಿಸಿ ಸರ್ವಾನುಮತದಿಂದಲೂ ಆಯ್ಕೆಯಾಗಿದ್ದರು. ಈಗ ಬೇರೆ ಸ್ಥಿತಿ ಇದೆ ಎಂದರು.
ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. ಹೀಗಿದ್ದೂ13 ಚುನಾವಣೆಗಳನ್ನು ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದರು.
ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು. ಸಾಧನಾ ಸಮಾವೇಶ ಆಯೋಜಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದರು.




