ಸಿದ್ದರಾಮಯ್ಯ ಪರ ಅಹಿಂದ ನಾಯಕರ ಬ್ಯಾಟಿಂಗ್
ಬೆಂಗಳೂರು: ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಿದ್ದಾಂತವನ್ನು ಪಾಲಿಸುತ್ತಿರುವ ಎಲ್ಲ ವರ್ಗ, ಧರ್ಮದವರಿಗೆ ಸರಿಸಮಾನವಾಗಿ ಧೀಮಂತ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ಅಹಿಂದ ರಾಜ್ಯ ಜಂಟಿ ಮುಖ್ಯ ಸಂಚಾಲಕ ಎನ್.ವೆಂಕಟೇಶ್ ಗೌಡ ಹೇಳಿದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ನಗರದ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಹಿಂದ ಚಳುವಳಿ ಸಂಘಟನೆ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಆಯೋಗಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜವಾದಿ ಚಳುವಳಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸತ್ತಿರುವ ಮಹಾನ್ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರು.
ಮೊದಲನೇ ಬಾರಿ ಮುಖ್ಯಮಂತ್ರಿಯಾಗಿ ಆಡಳಿತದಲ್ಲಿ ಸಿದ್ದರಾಮಯ್ಯರವರು 165 ಭರವಸೆ ಕೊಟ್ಟಿದ್ದರು. ಆಡಳಿತಕ್ಕೆ ಬಂದ ನಂತರ ಎಲ್ಲ ಭರವಸೆಗಳನ್ನು ಈಡೇರಿಸಿದ ದೇಶದ ಮೊಟ್ಟ ಮೊದಲ ಮುಖ್ಯಮಂತ್ರಿ ಎಂಬ ಕೀರ್ತಿಗೆ ಸಿದ್ದರಾಮಯ್ಯ ಅವರು ಪಾತ್ರರಾದರು ಎಂದರು.
ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ 5 ಗ್ಯಾರಂಟಿ ಯೋಜನೆಗಳನ್ನು ನಾಡಿನ ಪ್ರತಿ ಕುಟುಂಬಕ್ಕೆ ತಲುಪಿಸಿ ಪಾರದರ್ಶಕ ಆಡಳಿತ ನೀಡಿದ್ದಾರೆ. ಇತ್ತಿಚೇಗೆ ಕೆಲವು ವಿದ್ಯಮಾನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬದಲಾವಣೆ ಮಾಡಬೇಕು ಎಂದು ಅಪಸ್ವರ ಎತ್ತಿದ್ದಾರೆ. ಜನಪರ ಆಡಳಿತ, ಭ್ರಷ್ಟಚಾರರಹಿತ ಆಡಳಿತ ನೀಡಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರನ್ನು ಬದಲಾವಣೆ ಮಾಡಿದರೆ ಅಹಿಂದ ಚಳುವಳಿ ರಾಜ್ಯಾದ್ಯಂತ ಹೋರಾಟ ಮಾಡಿಲಿದೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಹಿಂದ ಚಳುವಳಿ ಸಂಘಟನೆಯ ಮೂರ್ತಿ ಸಿದ್ದಯ್ಯ, ಪ್ರಜ್ವಲ್ ಸ್ವಾಮಿ, ರಿಯಾಜ್ ಮೊಹಮದ್, ಅಶೋಕ್ ಕುಮಾರ್, ಯೋಗೇಶ್ವರಿ ವಿಜಯ್, ವೆಂಕಟೇಶ್, ಮಂಡ್ಯ ಕೃಷ್ಣಪ್ಪ, ಮೋಹನ್, ರೂಪ ಕೃಷ್ಣಪ್ಪ, ಸರಸ್ವತಮ್ಮ, ದಾಸ್ ಪ್ರಕಾಶ್, ನಾಗರಾಜ್, ಸುರೇಂದ್ರ, ಹರೀಶ್ ಬಾಬು, ನಾರಾಯಣಸ್ವಾಮಿ, ಮಂಜುನಾಥ್ ಭಾಗವಹಿಸಿದ್ದರು.




