ನಾಡಿನ ಜನಪ್ರಿಯ ದಲಿತ ಹೋರಾಟಗಾರ ಲಕ್ಷ್ಮಿನಾರಾಯಣ ನಾಗವಾರ ಅವರ ನಿಧನದಿಂದ ದುಃಖಿತನಾಗಿದ್ದೇನೆ.
- ಚುನಾವಣೆಯಲ್ಲಿ ಸೋಲುವ ಭಯದಿಂದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ: ಆರ್.ಅಶೋಕ
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
ದಲಿತ ಸಮುದಾಯವನ್ನೇ ತನ್ನ ಕುಟುಂಬವನ್ನಾಗಿಸಿಕೊಂಡಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು ಸಂಘಟನೆ ಮತ್ತು ಹೋರಾಟದ ಮೂಲಕ ದನಿ ಇಲ್ಲದ ದಮನಿತ ಸಮುದಾಯಕ್ಕೆ ದನಿಯಾಗಿದ್ದವರು.
ರಾಜ್ಯದ ಯಾವ ಮೂಲೆಯಲ್ಲಿಯೂ ದಲಿತರ ಮೇಲೆ ಅನ್ಯಾಯ-ದೌರ್ಜನ್ಯ ನಡೆದರೂ ಅಲ್ಲಿಗೆ ಧಾವಿಸಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು, ಇಡೀ ರಾಜ್ಯ ಸುತ್ತಾಡಿ ದಲಿತ ಸಂಘರ್ಷ ಸಮಿತಿಯನ್ನು ಕಟ್ಟಿ ಬೆಳೆಸಿದವರು.
ಹೆಚ್ಚು ಕಡಿಮೆ ಮೂರು ದಶಕಗಳಿಂದ ನನ್ನ ಜೊತೆ ಒಡನಾಟ ಹೊಂದಿದ್ದ ಲಕ್ಷ್ಮಿನಾರಾಯಣ ನಾಗವಾರರ ನಿಧನದಿಂದ ನಾನೂ ಒಬ್ಬ ಆತ್ಮೀಯ ಸಂಗಾತಿಯನ್ನು ಕಳೆದುಕೊಂಡಿದ್ದೇನೆ.
ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
– ಸಿದ್ದರಾಮಯ್ಯ, ಸಿಎಂ




