ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಕುರಿತಾಗಿ ವ್ಯಾಪಕ ಚರ್ಚೆ ನಡೆದಿರುವ ಬೆನ್ನಲ್ಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡಕ್ಕೆ ಮತ್ತೆ ಜೀವ ಬಂದಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈ ಪ್ರಕರಣದ ಬಗ್ಗೆ ತಮ್ಮ ವಿರುದ್ಧ ಖಾಸಗಿ ಪ್ರಕರಣ ದಾಖಲಿಸಲು ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ಆರಂಭವಾಗಿದೆ.
ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿರುವ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ, ನೋಟಿಸ್ ಜಾರಿಗೊಳಿಸಿದೆ.
ಸಿದ್ದರಾಮಯ್ಯ ಪತ್ನಿ ಬಿ. ಎಂ. ಪಾರ್ವತಿ, ಅವರ ಸಹೋದರ ಬಿ. ಎಂ. ಮಲ್ಲಿಕಾರ್ಜುನ ಸ್ವಾಮಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಮೈಸೂರಿನ ವಿಜಯನಗರ ಠಾಣಾಧಿಕಾರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.




