ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಕುರಿತು ರಾಜ್ಯದಲ್ಲಿ ಉಂಟಾಗಿರುವ ವಿದ್ಯಮಾನಗಳ ಬಗ್ಗೆ ವರಿಷ್ಠರಿಗೆ ಮುಖ್ಯಮಂತ್ರಿ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ವರದಿ ನೀಡಲಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗು ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಅಲ್ಲಿ ಇಬ್ಬರೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ, ಪಕ್ಷದ ವರಿಷ್ಠೆ ಸೋನಿಯಾಗಾಂಧಿ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಲಿದ್ದಾರೆ.
ಈ ನಾಯಕರ ಭೇಟಿ ಸಂದರ್ಭದಲ್ಲಿ ತಮ್ಮ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನದ ಹಿನ್ನೆಲೆಯಲ್ಲಿ ಮುಂದೆ ಯಾವ ರೀತಿಯ ಹೆಜ್ಜೆ ಇಡಬೇಕು, ಕಾನೂನು ಹೋರಾಟದ ಸ್ವರೂಪ ಹೇಗಿರಬೇಕು ಎಂಬೆಲ್ಲಾ ವಿಚಾರವಾಗಿ ಸಿದ್ದರಾಮಯ್ಯ ಕಾಂಗ್ರೆಸ್ ವರಿಷ್ಠರ ಜತೆ ಸಮಾಲೋಚನೆ ನಡೆಸಲಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ. ಕೇಂದ್ರ ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಬುಡಮೇಲು ಮಾಡುವ ಪ್ರಯತ್ನ ನಡೆಸಿದೆ. ಹಾಗಾಗಿಯೇ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದ ತಮ್ಮ ವಿರುದ್ಧದ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಸಿದ್ದರಾಮಯ್ಯ ವರಿಷ್ಠರಿಗೆ ಮನವರಿಕೆ ಮಾಡಿಕೊಡುವರು.
ಭೇಟಿಯ ನಂತರ ಇಬ್ಬರು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.




