ಬೆಂಗಳೂರು: ಜಾತಿಗಣತಿ ವರದಿ ಜಾರಿ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯ ಅವರ ಕ್ರಮಕ್ಕೆ ಜೈನ ಸ್ವಾಮೀಜಿ, ಮಡಿವಾಳ ಸ್ವಾಮೀಜಿ, ಕೋಲಿ ಸಮಾಜ ಸೇರಿದಂತೆ ಹಲವು ಸಮಾಜದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಾಗಿದ್ದರೆ ಮುಖ್ಯಮಂತ್ರಿ ಯಾರಿಗೆ ನ್ಯಾಯ ಕೊಡಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ಸಮುದಾಯದವರಿಗೆ ನ್ಯಾಯ ಕೊಡಿಸಬೇಕು ಎಂಬುದು ವರದಿಯ ಆಶಯ. ಆದರೆ, ಎಲ್ಲ ಸಮುದಾಯದವರೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಮುಖ್ಯಮಂತ್ರಿ ಬಸವಕಲ್ಯಾಣದಲ್ಲಿ ಅನುಭವ ಮಂಟಪವನ್ನು ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ಆದರೆ, ಅದಕ್ಕಿಂತ ಮೊದಲು ತಮ್ಮ ನಡೆನುಡಿಯನ್ನು ತಿದ್ದಿಕೊಳ್ಳಬೇಕು ಎಂದರು.
ಬೀದರ್ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಕ್ರಮ ಖಂಡನೀಯ. ರಾಜ್ಯ ಸರ್ಕಾರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದವರ ವಿರುದ್ಧ ಕ್ರಮ ಜರುಗಿಸಬೇಕು ಎಂದರು.




