ಸಿದ್ದರಾಮಯ್ಯ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ: ವಿಜಯೇಂದ್ರ

2 years ago

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಾಗಿಲು ತೆರೆದು ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ಪರ್ಸೆಂಟೇಜ್ ವ್ಯವಹಾರವನ್ನು ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಬಯಲು ಮಾಡಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಈ ಹಿಂದೆ ಬಿಜೆಪಿ ಮೇಲೆ ಹೊರಿಸಿದ್ದ ಆಧಾರ ರಹಿತ 40% ಆರೋಪವನ್ನು ಮೀರಿಸಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿದೆ ಎನ್ನುವುದನ್ನು ಬಿ. ಶಿವರಾಂ ಅವರು ಮಾಧ್ಯಮಗೋಷ್ಠಿ ಕರೆದು ಸಾಕ್ಷೀಕರಿಸಿದ್ದಾರೆ. ಸ್ವತಃ ಕಾಂಗ್ರೆಸ್ಸಿಗರೇ ಈ ಮಟ್ಟದಲ್ಲಿ ರೋಸಿ ಹೋಗಿದ್ದಾರೆಂದರೆ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ ಎಂದರು.

ಅಭಿವೃದ್ಧಿ, ಜನಕಲ್ಯಾಣ ಕಾರ್ಯಗಳನ್ನು ಸಂಪೂರ್ಣವಾಗಿ ಮರೆತಿರುವ ಕಾಂಗ್ರೆಸ್ ಸರ್ಕಾರ ಎಲ್ಲೆಂದರಲ್ಲಿ ಭ್ರಷ್ಟಾಚಾರದ ಅಂಗಡಿಗಳನ್ನು ತೆರೆಯುವುದರ ಜತೆಗೆ ಹೆಜ್ಜೆ ಹೆಜ್ಜೆಗೂ ಎಟಿಎಂ (ATM) ಮಾದರಿ ಕಮಿಷನ್ ಕೌಂಟರ್‌ಗಳನ್ನೂ ತೆರೆದು ಕುಳಿತಿದೆ. ಈ ಸರ್ಕಾರವನ್ನು ಕಿತ್ತೊಗೆಯುವುದೊಂದೇ ಜನರಿಗಿರುವ ಮಾರ್ಗವಾಗಿದೆ ಎಂದರು.

Leave a Reply