ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ರಾಜ್ಯದಲ್ಲಿ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೊಂದಲ ಮತ್ತು ಸಮಸ್ಯೆ ಪರಿಹರಿಸಲು ನಾಳೆ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್ ಕೆ ಪಾಟೀಲ್, ನಾಳೆ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಳ್ಳಲಾಗಿರುವ ಈ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ/ನೌಕರರು ಸಮೀಕ್ಷಾ ಕಾರ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ಪ್ರಾಯೋಜಿಸಲಾಗಿದೆ ಎಂದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕಾಗಿ ಗಣತಿದಾರರಾಗಿ ನಿಯೋಜಿಸಲ್ಪಡುವ ಸರ್ಕಾರ, ನಿಗಮ/ಮಂಡಳಿಗಳ ಅಧಿಕಾರಿ/ ನೌಕರರುಗಳ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 2021ರಡಿ ಹಾಗೂ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರನ್ವಯ ಶಿಸ್ತುಕ್ರಮ ಮತ್ತು ದಂಡನೆ ವಿಧಿಸುವ ಅಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಪ್ರತ್ಯಾಯೋಜಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದರು.




