ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಜನತಾದರ್ಶನಕ್ಕೆ ಚಾಲನೆ ನೀಡಿದ ಸಿದ್ದರಾಮಯ್ಯ

3 years ago

#Siddaramaiah #initiated #Janatadarshan #provide #reliefonthespot

ಬೆಂಗಳೂರು: ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಸದಾಶಯದೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಜನತಾದರ್ಶನ ನಡೆಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಎಸ್ಪಿಗಳ ಸಮ್ಮುಖದಲ್ಲಿ ಜನತಾದರ್ಶನ ನಡೆಸಿದರು. ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೊದಲ ಅವಧಿಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಖುದ್ದಾಗಿ ತಾವೇ ಗೃಹಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸುತ್ತಿದ್ದರು. ಅದರಲ್ಲಿ ಸಾವಿರಾರು ಮಂದಿ ಭಾಗವಹಿಸುತ್ತಿದ್ದರು. ಎರಡನೇ ಹಂತದಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಮತ್ತೆ ಜನತಾದರ್ಶನ ನಡೆಸಲಿದ್ದಾರೆ ಎಂಬ ಚರ್ಚೆಗಳಿದ್ದವು. ಅದರಂತೆ ಇದೀಗ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಜನತಾ ದರ್ಶನ ನಡೆಸಿದ್ದು, ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಮಟ್ಟದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ.

ಇಂದು ನಡೆದ ಜನತಾ ದರ್ಶನದಲ್ಲಿ ಜನ ಸಾಮಾನ್ಯರ ತಾಂತ್ರಿಕ ಹಾಗೂ ಕಾನೂನಾತ್ಮಕ ಅಡಚಣೆಗಳಿಲ್ಲದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲಾಗಿದೆ. ಗಂಭೀರ ಸ್ವರೂಪದ ಅಡಚಣೆಗಳಿರುವ ಅರ್ಜಿಗಳನ್ನು ಸ್ವೀಕರಿಸಿ ಸಾರ್ವಜನಿಕ ಕುಂದುಕೊರತೆ ನಿವಾರಣೆ ವ್ಯವಸ್ಥೆ (ಐಪಿಜಿಆರ್ಎಸ್) ತಂತ್ರಾಂಶದಲ್ಲಿ ದಾಖಲಿಸಲಾಗಿದೆ.

Leave a Reply