ಚಾಮರಾಜನಗರ: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಅಂತಹವರನ್ನು ಗುರುತಿಸಿ ಗಡೀಪಾರು ಮಾಡುವಂತೆ ಆದೇಶಿಸಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಮಲೆ ಮಹದೇಶ್ವರ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ಈ ಸಂಬಂಧ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ತಿಳಿಸಿದರು.
ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ.ಎಂತಹ ಸಮಯದಲ್ಲೂ ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು ಎಂದರು.
ಪಹಲ್ಗಾಮ್ ಘಟನೆ ಅತ್ಯಂತ ಖಂಡನೀಯವಾದ ಹಾಗೂ ಅಮಾನುಷವಾದ ಘಟನೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತು ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎಂದರು.
ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು. ಪುಲ್ವಾಮಾ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು ಎಂದರು.
ಇಂಥ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಉಗ್ರರು ಯಾವುದೇ ಧರ್ಮ ಜಾರಿಗೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಸರ್ಕಾರದ ಜವಾಬ್ದಾರಿ ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಮ್ಮ ಸರ್ಕಾರ ಮತ್ತು ಪಕ್ಷ ಕೊಡುತ್ತದೆ ಎಂದರು.
ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುತ್ತಿದೆ. ಪೊಲೀಸ್ ಗೌರವದಿಂದ ಅಂತ್ಯಕ್ರಿಯೆ ನಡೆಯಲಿದೆ ಎಂದರು.




