ಬೆಂಗಳೂರು: ಈ ಶತಮಾನದ ಅತಿ ದೊಡ್ಡ ಜೋಕ್ ಯಾವುದೆಂದರೆ ಅದು BJP-JDS ನಡೆಸುತ್ತಿರುವ ಪಾದಯಾತ್ರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಬಿಜೆಪಿ, ಜೆಡಿಎಸ್ ಜಂಟಿ ಪಾದಯಾತ್ರೆ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮುಡಾದಲ್ಲಿ 50-50ರ ಅನುಪಾತದಲ್ಲಿ ನಿವೇಶನ ನೀಡುವ ನಿಯಮ ತಂದಿದ್ದೇ ಬಿಜೆಪಿಯ ಅಧಿಕಾರಾವಧಿಯಲ್ಲಿ. ಈ ನಿಯಮದ ಅನುಸಾರ ಸಿದ್ದರಾಮಯ್ಯರಿಗೆ ಬದಲಿ ನಿವೇಶನ ಕೊಟ್ಟಿದ್ದು ಕೂಡ BJPಯ ಅಧಿಕಾರಾವಧಿಯಲ್ಲಿ. ಈಗ ಸಿದ್ದರಾಮಯ್ಯ ಅಕ್ರಮವಾಗಿ ಸೈಟ್ ಪಡೆದಿದ್ದಾರೆ ಎಂದು ಪಾದಯಾತ್ರೆ ಮಾಡುತ್ತಿರುವ BJPಯವರಿಗೆ ಮತಿಭ್ರಮಣೆಯಾಗಿದೆ ಎಂದು ಭಾವಿಸಬೇಕೋ ಅಥವಾ ಅವರ ಹುಚ್ಚು ಅತಿರೇಕಕ್ಕೆ ಹೋಗಿದೆ ಎಂದು ತಿಳಿಯಬೇಕೋ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ಕಳಂಕ ಅಂಟಿಸಿಕೊಳ್ಳದ ವ್ಯಕ್ತಿತ್ವ ಸಿದ್ದರಾಮಯ್ಯರದ್ದು. ಮುಡಾ ವಿಚಾರದಲ್ಲೂ ಸಿದ್ದರಾಮಯ್ಯ ಕಾನೂನಿನ ಅನುಸಾರವೇ ನಿವೇಶನ ಪಡೆದಿದ್ದಾರೆ ಎಂದಿದ್ದಾರೆ.
ಇದೇ ರೀತಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಕೂಡ ಮುಡಾದಿಂದ ಕೈಗಾರಿಕಾ ನಿವೇಶನ ಪಡೆದಿದ್ದಾರೆ. ಬಿಜೆಪಿಯ ಹಲವು ನಾಯಕರ ಬಳಿ ಮುಡಾ ನಿವೇಶನಗಳಿವೆ. ಹೀಗಿರುವಾಗ ಸಿದ್ದರಾಮಯ್ಯ ಮಾತ್ರ ವಿಪಕ್ಷಗಳ ಟಾರ್ಗೆಟ್ ಯಾಕೆ.? ಸಿದ್ದರಾಮಯ್ಯರು ಶೋಷಿತರು ಹಾಗೂ ಬಡವರ ಪಾಲಿನ ಧ್ವನಿಯಾಗಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.




