ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಕಾನೂನಿನ ಕುಣಿಕೆಯೊಳಗೆ ಸಿಲುಕಿಸಲು ದೊಡ್ಡ ಮಟ್ಟದಲ್ಲಿ ಪ್ರಯತ್ನ ಆರಂಭವಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಿದ್ದರಾಮಯ್ಯ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮ ಕುಟುಂಬ ಸದಸ್ಯರಿಗೆ ಹೆಚ್ಚುವರಿ ನಿವೇಶನ ಕೊಡಿಸಿದ್ದಾರೆ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಹಲವು ದಾಖಲೆಗಳನ್ನು ರಾಜ್ಯಪಾಲರಿಗೆ ನೀಡಿದ್ದು, ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿದ್ದಾರೆ.
ಈ ಮನವಿ ಪರಿಶೀಲಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತನಿಖೆಗೆ ಅನುಮತಿ ನೀಡುವ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಒಂದು ವೇಳೆ ರಾಜ್ಯಪಾಲರು ಸಿಎಂ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡಿದಲ್ಲಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ದಟ್ಟವಾಗಿದೆ.




