ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ಜಾರಿ ನಿರ್ದೇಶನಾಲಯದ ಕುಣಿಕೆಗೆ ಸಿಲುಕುವ ಸಾಧ್ಯತೆ ದಟ್ಟವಾಗತೊಡಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಈಗಾಗಲೇ ಮೈಸೂರು ನಗರ ಅಭಿವೃದ್ಧಿ ಕಚೇರಿ ಮತ್ತು ಕೆಲವು ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದೆ. ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದೆ. ವಶಪಡಿಸಿಕೊಂಡಿರುವ ದಾಖಲೆ ಪತ್ರಗಳ ಆಧಾರದಲ್ಲಿ ವಿಚಾರಣೆಗೆ ಬರುವಂತೆ ಮುಡಾ ಮಾಜಿ ಅಧ್ಯಕ್ಷ ಮರಿಗೌಡ, ಮಾಜಿ ಆಯುಕ್ತರಾದ ದಿನೇಶ್, ನಟೇಶ್ ಸೇರಿದಂತೆ ಏಳು ಜನರಿಗೆ ನೋಟಿಸ್ ನೀಡಿದೆ.
ಇದರ ಮುಂದುವರೆದ ಭಾಗವಾಗಿ ಸಿಎಂ ಸಿದ್ದರಾಮಯ್ಯನವರ ಮನೆಬಾಗಿಲನ್ನು ಜಾರಿ ನಿರ್ದೇಶನ ಇಲಾಖೆ ಅಧಿಕಾರಿಗಳು ಬಡಿಯಲಿದ್ದಾರೆ. ಮೇಲಿನವರ ವಿಚಾರಣೆ ಮುಗಿದ ನಂತರ ಸಿದ್ದರಾಮಯ್ಯ ವಿಚಾರಣೆ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ.




