ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರಕುತ್ತಿದೆಯೇ? ಚಿಕಿತ್ಸೆ ಪಡೆಯುವಲ್ಲಿ ಏನಾದರೂ ಅಡೆತಡೆಗಳಿವೆಯೇ? ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳ ಸ್ಪಂದನೆ ಹೇಗಿದೆ? ಎಂಬುದನ್ನು ಸ್ವತಃ ರೋಗಿಗಳಿಂದಲೇ ಮಾಹಿತಿಯನ್ನು ಸಿಎಂ ಸಿದ್ದರಾಮಯ್ಯ ಪಡೆದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಲ್ಲಿ ಬಹುತೇಕರು ಬಡವರು. ಖಾಸಗಿ ಆಸ್ಪತ್ರೆಯ ವೆಚ್ಚ ಭರಿಸಲಾಗದ ಕಾರಣಕ್ಕಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಎಂದಿದ್ದಾರೆ.
ಆರ್ಥಿಕ ಪರಿಸ್ಥಿತಿಯ ಕಾರಣಕ್ಕೆ ಯಾವೊಬ್ಬ ರೋಗಿಯು ಗುಣಮಟ್ಟದ ಚಿಕಿತ್ಸೆಯಿಂದ ವಂಚಿತನಾಗಬಾರದೆಂದು ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ವೈದ್ಯಕೀಯ ಸಿಬ್ಬಂದಿ ಹಾಗೂ ಸಲಕರಣೆಗಳನ್ನು ಒದಗಿಸಲಾಗಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳು ಕೂಡ ಖಾಸಗಿ ಆಸ್ಪತ್ರೆಗಳಂತೆ ಉತ್ತಮ ಸೇವೆ, ಉತ್ಕೃಷ್ಟ ಸೌಲಭ್ಯ ಒದಗಿಸಲೇಬೇಕು. ಈ ವಿಷಯದಲ್ಲಿ ಯಾವ ರಾಜಿಯೂ ಇಲ್ಲ ಎಂದು ಹೇಳಿದ್ದಾರೆ.










