ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದರು.
ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು, ಆದ್ದರಿಂದ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದರು.




