ಬಲ್ದೋಟಾ ಕಾರ್ಖಾನೆ ಸ್ಥಾಪಿಸುವ ಪ್ರಸ್ತಾವನೆಗೆ ಸಿದ್ದರಾಮಯ್ಯ ತಡೆಯಾಜ್ಞೆ

1 year ago

ಬೆಂಗಳೂರು: ದೇಶದ ಪ್ರತಿಷ್ಠಿತ ಉಕ್ಕು ತಯಾರಿಕೆ ಸಂಸ್ಥೆ ಬಲ್ದೋಟಾ ಕೊಪ್ಪಳ ಹೊರ ವಲಯದಲ್ಲಿ ಕಾರ್ಖಾನೆ ಸ್ಥಾಪಿಸುವ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ತಡೆಯಾಜ್ಞೆ ನೀಡಿದ್ದಾರೆ.

ಜಿಲ್ಲಾ ಕೇಂದ್ರದ ಹೊರವಲಯದಲ್ಲಿ ಈ ಕಾರ್ಖಾನೆ ಸ್ಥಾಪನೆಯಾಗುತ್ತಿದ್ದು, ಸುತ್ತಮುತ್ತಲಿನ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗಲಿದೆ. ಜಲ ಮತ್ತು ವಾಯುಮಾಲಿನ್ಯ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿರುವ ಸ್ಥಳೀಯರು ಇದರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. 

ನಾಗರಿಕರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಹಾಗೂ ಕೊಪ್ಪಳ ಪರಿಸರ ಹಿತರಕ್ಷಣಾ ವೇದಿಕೆ ಪ್ರಮುಖರು ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾದರು.

ಆಗ ನಿಯೋಗ ಕಾರ್ಖಾನೆ ವಿಸ್ತರಣೆ ಮಾಡಿದರೆ ಜಿಲ್ಲಾಕೇಂದ್ರಕ್ಕೆ ವಿಪರೀತ ಧೂಳು ಬರುತ್ತದೆ. ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ವಿಸ್ತರಣೆಗೆ ಅವಕಾಶ ಕೊಡಬಾರದು ಎಂದು ಮನವರಿಕೆ ಮಾಡಿದರು.

ಕಾರ್ಖಾನೆ ಆರಂಭಿಸಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ‌ ಅನುಮತಿ ಕೊಟ್ಟಿಲ್ಲ. ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಬಗ್ಗೆ ‌ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಗಮನಿಸಿದ್ದೇನೆ. ಈ ಕುರಿತು ‌ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರೊಂದಿಗೆ ಸಭೆ ನಡೆಸುವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

Leave a Reply