ಬೆಂಗಳೂರು: ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಭೇಟಿನೀಡಿದ ಸಿಬ್ಬಂದಿಗೆ ಸಿದ್ದರಾಮಯ್ಯ ಮಾಹಿತಿ ನೀಡಿದರು.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿ ಜೊತೆ ಮಾಹಿತಿ ಹಂಚಿಕೊಳ್ಳಿ ಎಂದು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.







