ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ, ಹಲವು ರಾಜಕೀಯ ವಿದ್ಯಮಾನಗಳು ನಡೆಯುತ್ತಿದ್ದು ಏಪ್ರಿಲ್ 2 ರಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಮಂಡಿನೋವಿನ ಕಾರಣ ಕಳೆದ ನಾಲ್ಕು ತಿಂಗಳಿನಿಂದ ದೆಹಲಿಗೆ ತೆರಳದ ಸಿದ್ದರಾಮಯ್ಯ ಇದೀಗ ದೆಹಲಿಗೆ ತೆರಳುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಹನಿಟ್ರ್ಯಾಪ್ ಕುರಿತು ಯಾವ ರೀತಿ ತನಿಖೆ ನಡೆಸಬೇಕು ಎಂಬ ಬಗ್ಗೆ ಹೈಕಮಾಂಡ್ ಅಭಿಪ್ರಾಯ ಕೇಳಲಿದ್ದಾರೆ ಎಂದು ಗೊತ್ತಾಗಿದೆ. ಈ ಭೇಟಿಯ ವೇಳೆ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳ ನಾಮಕರಣ ಕುರಿತಂತೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ. ಜೊತೆಗೆ ವಾಲ್ಮೀಕಿ ನಿಗಮದ ಹಗರಣದ ಆರೋಪ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ ನಾಗೇಂದ್ರ ಅವರನ್ನು ಮಂತ್ರಿಮಂಡಲಕ್ಕೆ ಪುನರ್ ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ಮಾತುಕತೆ ನಡೆಸಲಿದ್ದಾರೆ.
ಜೊತೆಗೆ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿವಾರು ಸಮೀಕ್ಷೆಯ ವರದಿ ಅನುಷ್ಠಾನ ಕುರಿತಂತೆ ಮಾತುಕತೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ. ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಎರಡು ವರ್ಷಗಳು ಪೂರ್ಣಗೊಳ್ಳುತ್ತಿದ್ದು ಮೇ ತಿಂಗಳಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಆಯೋಜಿಸಲು ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಈ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಲಿದ್ದಾರೆ.



